More

    ರೋಗ ತಡೆಗೆ ಜೀವನಶೈಲಿ ಮಾರ್ಪಾಡು ಅಗತ್ಯ: ಡಾ. ಎಂ.ಕೆ.ಮಹೇಶ್

    ಸೊರಬ: ವಿದ್ಯಾರ್ಥಿಗಳು ಉತ್ತಮ ಜೀವನಶೈಲಿ, ಆರೋಗ್ಯ ಹೊಂದಿ ನಿರಂತರ ಅಧ್ಯಯನದಲ್ಲಿ ತೊಡಗಿದರೆ ಶೈಕ್ಷಣಿಕವಾಗಿ ಯಶಸ್ಸು ಪಡೆಯಬಹುದು ಎಂದು ಉದ್ರಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಎಂ.ಕೆ.ಮಹೇಶ್ ಹೇಳಿದರು.
    ಬುಧವಾರ ಪಟ್ಟಣದ ಸಾರ್ವಜನಿಕ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನ, ಎಸ್‌ಸಿಎಸ್‌ಪಿ ಕಾರ್ಯಕ್ರಮದಡಿ ತಾಪಂ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಉದ್ರಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.
    ಕೇವಲ ಔಷಧ, ಚಿಕಿತ್ಸೆ ನೀಡುವುದು ಕಾರ್ಯಕ್ರಮದ ಉದ್ದೇಶವಲ್ಲ. ರೋಗ ಬಾರದ ಹಾಗೆ ಜೀವನಶೈಲಿ ಮಾರ್ಪಾಡು ಮಾಡಿಕೊಳ್ಳುವುದೂ ಚಿಕಿತ್ಸೆಯ ಒಂದು ಭಾಗ ಎಂದರು.
    ತಾಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪ್ರಭು ಸಾಹುಕಾರ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಗಮನ ನೀಡಿ, ರೋಗಗಳು ಹರಡುವುದನ್ನು ತಡೆಯಬೇಕು ಎಂದು ತಿಳಿಸಿದರು.

    ತಾಪಂ ಅಧ್ಯಕ್ಷ ಪ್ರದೀಪ್‌ಕುಮಾರ್, ಗುಡವಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಡಾ. ಎ.ಪಿ.ನದಾಫ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಉಮೇಶ್, ಕಚೇರಿ ಮುಖ್ಯಸ್ಥ ಶಿವಕುಮಾರ್, ಡಿಎಸ್‌ಎಸ್‌ನ ಶಾಮಣ್ಣ, ದರ್ಶನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts