ಒಣದ್ರಾಕ್ಷಿಗಳಲ್ಲಿ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಬೋರಾನ್ ನಂತಹ ಖನಿಜಗಳಿವೆ. ಕಬ್ಬಿಣವು ರಕ್ತದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸಿ, ಆಯಾಸವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಕ್ಯಾಲ್ಸಿಯಂ ಮತ್ತು ಬೋರಾನ್ ಮೂಳೆಗಳನ್ನು ಬಲಪಡಿಸುತ್ತದೆ. ವಿಶೇಷವಾಗಿ ಚಳಿಗಾಲದಲ್ಲಿ ಕಡಿಮೆ ಸೂರ್ಯನ ಬೆಳಕು ವಿಟಮಿನ್ ಡಿ ಕೊರತೆಗೆ ಕಾರಣವಾಗಬಹುದು. ಹಾಗಾಗಿ ಪ್ರತಿನಿತ್ಯ ಈ ಆಹಾರವನ್ನು ಸೇವಿಸುವುದರಿಂದ ಇದು ಮೂಳೆಗಳನ್ನು ಬಲಪಡಿಸಲು, ಕೀಲು ನೋವು ಕಡಿಮೆ ಮಾಡಲು ಸಹಾಯ ಮಾಡುತ್ತದೆ.