ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ? ತಿಂದ್ರೆ ಏನಾಗುತ್ತದೆ? ಇಲ್ಲಿದೆ ಉಪಯುಕ್ತ ಮಾಹಿತಿ... Banana

Banana
Published on

Banana : ಬಡವರು, ಮಧ್ಯಮ ವರ್ಗದವರು ಹಾಗೂ ಶ್ರೀಮಂತರು ಎಲ್ಲರಿಗೂ ಸುಲಭವಾಗಿ ಸಿಗುವ ಹಣ್ಣೆಂದರೆ ಅದು ಬಾಳೆಹಣ್ಣು ( Banana ). ಏಕೆಂದರೆ, ಇದರ ಬೆಲೆ ಇತರೆ ಹಣ್ಣುಗಳಿಗೆ ಹೋಲಿಸಿದರೆ ತುಂಬಾ ಕಡಿಮೆ. ಅಲ್ಲದೆ, ಬಾಳೆಹಣ್ಣು ಎಲ್ಲ ಸೀಸನ್​ಗಳಲ್ಲಿಯೂ ಸುಲಭವಾಗಿ ಸಿಗುತ್ತದೆ.

ಬಾಳೆಹಣ್ಣುಗಳು ( Banana ) ರುಚಿಯ ಜೊತೆಗೆ ಸಾಕಷ್ಟು ಪೋಷಕಾಂಶಗಳನ್ನು ಹೊಂದಿದೆ. ಇದು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಹೀಗಾಗಿ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಬಾಳೆಹಣ್ಣು ಹೊಂದಿದೆ. ದಿನಕ್ಕೊಂದು ಬಾಳೆಹಣ್ಣನ್ನು ಸೇವಿಸುವುದರಿಂದ ಆಸ್ಪತ್ರೆಯಿಂದ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.

ದೇಹವು ತುಂಬಾ ಹೀಟ್​ ಆಗಿದ್ದರೆ ಅದರ ಉಪಶಮನಕ್ಕೆ ಬಾಳೆಹಣ್ಣು ತುಂಬಾ ಪರಿಣಾಮಕಾರಿಯಾಗಿರುತ್ತದೆ. ತಿಂದ ಆಹಾರ ಸುಲಭವಾಗಿ ಜೀರ್ಣವಾಗಲೂ ಬಾಳೆಹಣ್ಣು ಸಹಕಾರಿ. ನೀವು ಹೊಟ್ಟೆ ಉರಿ ಮತ್ತು ವಿಪರೀತ ಶಾಖದಿಂದ ಬಳಲುತ್ತಿದ್ದರೆ ಬಾಳೆಹಣ್ಣು ತಿಂದರೆ ಎಲ್ಲವು ಶಮನಬಾಗುತ್ತದೆ. ಸದ್ಯ ಚಳಿಗಾಲ ಆರಂಭವಾಗುತ್ತಿದ್ದು, ಈ ಸೀಸನ್​ನಲ್ಲಿ ಬಾಳೆಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮವೇ ಎಂಬ ಪ್ರಶ್ನೆ ಹಲವರಲ್ಲಿರುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.

ಚಳಿಗಾಲದಲ್ಲಿ ಮೂಳೆ ನೋವು, ಸ್ನಾಯು ನೋವು ಹಾಗೂ ಕೀಲು ನೋವು ಸೇರಿದಂತೆ ಮುಂತಾದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ಈ ಸೀಸನ್​ನಲ್ಲಿ ನೀವು ಕ್ಯಾಲ್ಸಿಯಂ ಸಮೃದ್ಧವಾಗಿರುವ ಬಾಳೆಹಣ್ಣನ್ನು ತೆಗೆದುಕೊಂಡರೆ, ಈ ಸಮಸ್ಯೆಗಳನ್ನು ತಪ್ಪಿಸಬಹುದು. ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಶಿಯಂ, ಕಬ್ಬಿಣ, ಫೋಲೇಟ್, ನಿಯಾಸಿನ್, ರೈಬೋಫ್ಲಾವಿನ್ ಹಾಗೂ ಬಿ 6 ನಂತಹ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಿವೆ. ಇವೆಲ್ಲವೂ ಆರೋಗ್ಯವನ್ನು ಸುಧಾರಿಸುತ್ತದೆ.

ಮಲಬದ್ಧತೆ ನಿವಾರಣೆ

ಬಾಳೆಹಣ್ಣು ಕರಗುವ ಮತ್ತು ಕರಗದ ಫೈಬರ್ ಎರಡರಲ್ಲೂ ಸಮೃದ್ಧವಾಗಿದೆ. ಕರಗುವ ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಪ್ರವೃತ್ತಿಯನ್ನು ಹೊಂದಿದೆ. ಇದು ವ್ಯಕ್ತಿಯನ್ನು ದೀರ್ಘಕಾಲದವರೆಗೆ ಹಸಿವಿನಿಂದ ದೂರವಿರಿಸುತ್ತದೆ. ಬಾಳೆಹಣ್ಣು ತಿಂದರೆ ತೂಕ ಕಡಿಮೆಯಾಗುತ್ತದೆ. ಜೊತೆಗೆ, ಇದು ಮಲಬದ್ಧತೆಯನ್ನೂ ನಿವಾರಿಸುತ್ತದೆ.

ಬಹುಮುಖ್ಯವಾದ ವಿಚಾರ ಏನೆಂದರೆ, ಚಳಿಗಾಲದಲ್ಲಿ ಬಾಳೆಹಣ್ಣು ತಿಂದರೆ ಕೆಮ್ಮು ಮತ್ತು ನೆಗಡಿ ಬರುವ ಸಾಧ್ಯತೆ ಇದೆ. ಹಾಗಾಗಿ ರಾತ್ರಿ ಊಟದ ಬಳಿಕ ಬಾಳೆಹಣ್ಣು ತಿನ್ನಬೇಡಿ. ಉಸಿರಾಟದ ತೊಂದರೆ ಇರುವವರು ಕೂಡ ಚಳಿಗಾಲದಲ್ಲಿ ಬಾಳೆಹಣ್ಣು ಸೇವಿಸಬೇಡಿ. ಏಕೆಂದರೆ, ಲೋಳೆಯ ಅಥವಾ ಕಫದಂತಹ ಸಮಸ್ಯೆಗಳು ಉಂಟಾಗುತ್ತವೆ. ರಾತ್ರಿ ಬಿಟ್ಟು ಬೇರೆ ಸಮಯದಲ್ಲಿ ಬಾಳೆಹಣ್ಣು ತಿನ್ನಬಹುದು. ಆದರೆ, ಸೀಮಿತ ಪ್ರಮಾಣದಲ್ಲಿ ಮಾತ್ರ ಬಾಳೆಹಣ್ಣನ್ನು ಸೇವಿಸಿ.

ಹಕ್ಕು ನಿರಾಕರಣೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net