ಕಾಫಿಯಲ್ಲಿ ತೆಂಗಿನೆಣ್ಣೆ ಬೆರೆಸಿ ಸೇವಿಸಿದರೆ ಇಷ್ಟೆಲ್ಲಾ ಲಾಭಗಳಿವೆಯಾ? ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ….

Coconut Oil in Coffee
Published on

ಪ್ರತಿದಿನ ಕಾಫಿ ಕುಡಿಯುವ ಅಭ್ಯಾಸ ಯಾವಾಗಿಂದ ಶುರುವಾಯಿತು ಎಂದು ಕೇಳಿದರೆ, ಬಹುತೇಕರಿಗೆ ಉತ್ತರ ಗೊತ್ತಿಲ್ಲ. ಇದು ಪೂರ್ವಜರಿಂದ ಬಂದ ಒಂದು ಅಭ್ಯಾಸ ಎಂದೇ ಹೇಳುತ್ತಾರೆ. ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿಯಿಂದ ದಿನವನ್ನು ಶುರುಮಾಡಿ ರಾತ್ರಿ ಕಾಫಿಯೊಂದಿಗೆ ದಿನ ಮುಗಿಸುವವರಿದ್ದಾರೆ. ಪ್ರತಿದಿನ ಒಂದಲ್ಲ ಎರಡಲ್ಲ 4ರಿಂದ 5 ಕಾಫಿ ಕುಡಿಯುವವರೂ ಇದ್ದಾರೆ.

ಪ್ರತಿದಿನ ಕಾಫಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಒತ್ತಡ ಮತ್ತು ಆತಂಕ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಕಾಫಿಗೆ ತೆಂಗಿನೆಣ್ಣೆ ಸೇರಿಸುವುದರಿಂದ ದುಪ್ಪಟ್ಟು ಲಾಭವಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಿಂದ ಆಗುವ ಲಾಭಗಳೇನು ಎಂಬುದನ್ನು ಈಗ ತಿಳಿಯೋಣ.

ಕಾಯಿಲೆಗಳನ್ನು ತಡೆಯಲು ಸಹಾಯ

ಪ್ರತಿದಿನ ಬೆಳಗ್ಗೆ ಒಂದು ಕಪ್ ಕಾಫಿಯಲ್ಲಿ ಎರಡು ಚಮಚ ತೆಂಗಿನ ಎಣ್ಣೆಯನ್ನು ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಡಬಲ್ ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ಗಳು ಕ್ಯಾನ್ಸರ್, ಹೃದ್ರೋಗ ಮತ್ತು ಇತರ ಅಪಾಯಕಾರಿ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಕೊಬ್ಬರಿ ಎಣ್ಣೆ ಬೆರೆಸಿದ ಕಾಫಿ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬ್ಯಾಕ್ಟೀರಿಯಾ ಕೂಡ ಸುಲಭವಾಗಿ ಸಾಯುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಮೆದುಳಿನ ಆರೋಗ್ಯ

ಕಾಫಿ ಮತ್ತು ತೆಂಗಿನೆಣ್ಣೆ ಮಿಶ್ರಣವನ್ನು ಕುಡಿಯುವುದರಿಂದ ಮೆದುಳು ಕೂಡ ಸುಧಾರಿಸಿ, ಏಕಾಗ್ರತೆ ಹೆಚ್ಚುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳನ್ನು ತಡೆಯುತ್ತದೆ. ಮೆದುಳಿನ ನರಗಳನ್ನು ಸದೃಢವಾಗಿಡಲು ಸಹಾಯ ಮಾಡುತ್ತದೆ. ಆಗಾಗ ಜೀರ್ಣಕ್ರಿಯೆಯ ಸಮಸ್ಯೆಯಿಂದ ಬಳಲುತ್ತಿರುವವರು ತೆಂಗಿನೆಣ್ಣೆಯೊಂದಿಗೆ ಕಾಫಿಯನ್ನು ಸೇವಿಸಿದರೆ ಶೀಘ್ರದಲ್ಲೇ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ಖಿನ್ನತೆ ಕಡಿಮೆ

ಕಾಫಿ ಮತ್ತು ತೆಂಗಿನೆಣ್ಣೆ ಮಿಶ್ರಣವೂ ಮಧುಮೇಹದಿಂದ ಬಳಲುತ್ತಿರುವವರಿಗೆ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮತ್ತು ಇತರ ದೀರ್ಘಕಾಲದ ಕಾಯಿಲೆಗಳಿಂದ ದೇಹವನ್ನು ರಕ್ಷಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದು ಖಿನ್ನತೆಯನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದಿಷ್ಟೇ ಅಲ್ಲದೆ, ಇದು ಕರುಳಿನ ಚಲನೆಯನ್ನು ನಿಯಮಿತವಾಗಿ ಇಡುತ್ತದೆ. ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹ ಕಾಫಿ ಮತ್ತು ತೆಂಗಿನೆಣ್ಣೆ ಮಿಶ್ರಣ ಸಹಕಾರಿಯಾಗಿದೆ.

ಎಷ್ಟು ಪ್ರಮಾಣದಲ್ಲಿ ತೆಂಗಿನೆಣ್ಣೆ ಬಳಸಬೇಕು?

ನಿಮ್ಮ ಕಾಫಿ ಕಪ್​ನಲ್ಲಿ ತೆಂಗಿನ ಎಣ್ಣೆಯನ್ನು ಬಳಸಲು ನೀವು ಬಯಸಿದರೆ, ಬಿಸಿ ಕಾಫಿಗೆ 1 ಟೇಬಲ್​ ಸ್ಪೂನ್​ (14 ಗ್ರಾಂ) ಸೇರಿಸಿ ಮತ್ತು ಎಣ್ಣೆಯು ಚೆನ್ನಾಗಿ ಸಂಯೋಜಿಸಲ್ಪಟ್ಟಿದೆ ಎಂದು ಖಚಿತಪಡಿಸಿಕೊಳ್ಳಲು ಅದನ್ನು ಸಂಪೂರ್ಣವಾಗಿ ಬೆರೆಸಿ. ಕೊಬ್ಬಿನ ಅಂಶವನ್ನು ಹೆಚ್ಚಿಸಲು ಬಯಸುವುದಾದರೆ 2 ಟೇಬಲ್​ಸ್ಪೂನ್​ (28 ಗ್ರಾಂ) ತೆಂಗಿನ ಎಣ್ಣೆಯವರೆಗೂ ಬಳಸಬಹುದು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net