ರಾತ್ರಿ 9 ಗಂಟೆಯ ನಂತರ ಊಟ ಮಾಡ್ತೀರಾ? ಹಾಗಾದ್ರೆ ಈ ಎಲ್ಲಾ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ! Health

Health
Published on

Health: ನಮ್ಮ ಆಧುನಿಕ ಜೀವನಶೈಲಿಯಲ್ಲಿ, ತಡರಾತ್ರಿ ಕೆಲಸ ಮಾಡುವುದು, ಹೆಚ್ಚು ಮೊಬೈಲ್​ ಬಳಕೆ ಮಾಡುವುದು, ತಡವಾಗಿ ಮನೆಗೆ ಮರಳುವುದು ಸಾಮಾನ್ಯವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಅನೇಕ ಜನರು ರಾತ್ರಿ 9 ಗಂಟೆಯ ನಂತರ ಊಟ ಮಾಡುತ್ತಾರೆ. ಆದರೆ ರಾತ್ರಿ 9 ಗಂಟೆಯ ನಂತರ ಊಟ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಏನೆಲ್ಲಾ ಅಪಾಯ ಆಗುತ್ತದೆ ಗೊತ್ತಾ? ಬನ್ನಿ ತಿಳಿಯೋಣ

ಆರೋಗ್ಯದ ಮೇಲೆ ಅಡ್ಡ ಪರಿಣಾಮ

ತಡವಾಗಿ ಊಟ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

1. ಇದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

2.ಹಾರ್ಮೋನುಗಳ ಅಸಮತೋಲನವನ್ನು ಉಂಟುಮಾಡುತ್ತದೆ.

3. ನಿದ್ರೆಯ ಗುಣಮಟ್ಟವನ್ನು ಕುಗ್ಗಿಸುತ್ತದೆ.

4. ತೂಕ ಹೆಚ್ಚಾಗುವ ಸಾಧ್ಯತೆಗಳು ಹೆಚ್ಚು.

ಹಾಗಾಗಿ ನೀವು ಪ್ರತಿದಿನ ರಾತ್ರಿ 9 ಗಂಟೆಗೂ ಮೊದಲೇ ಊಟ ಮಾಡುವುದು ಉತ್ತಮ. ಇದರಿಂದ ನಿಮ್ಮ ಆರೋಗ್ಯ ಮೇಲೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net