ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ಈ 5 ಆಹಾರಗಳನ್ನು ಸೇವಿಸಿ ಸಾಕು| lifestyle

Cholesterol
Published on

lifestyle| ಇತ್ತೀಚಿನ ದಿನಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ವಯಸ್ಸಾದವರು ಮಾತ್ರವಲ್ಲದೇ ಯುವಕರು ಕೂಡ ಅಧಿಕ ಕೊಲೆಸ್ಟ್ರಾಲ್​ನಿಂದ ಬಳಲುತ್ತಿದ್ದಾರೆ. ತಪ್ಪು ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಗಳು ಕೊಲೆಸ್ಟ್ರಾಲ್ ಸಮಸ್ಯೆಯನ್ನು ಹೆಚ್ಚಿಸುತ್ತಿವೆ. ಆದರೆ ಈ ಅಧಿಕ ಕೊಲೆಸ್ಟ್ರಾಲ್​ ಮಟ್ಟ ಹೆಚ್ಚಿರುವವರು ಒಂದು ಕಡೆ ಆದರೆ, ಕೊಲೆಸ್ಟ್ರಾಲ್​ ಕೊರತೆಯನ್ನು ಅನುಭವಿಸುತ್ತಿರುವವರು ಸಹ ಹಲವು ಮಂದಿ ಇದ್ದಾರೆ. ನಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಕಂಡುಬರುತ್ತದೆ. ಮೊದಲನೆಯದು "ಒಳ್ಳೆಯ ಕೊಲೆಸ್ಟ್ರಾಲ್" ಎಂದು ಕರೆಯಲ್ಪಡುವ HDL (HDL ಹೈ-ಡೆನ್ಸಿಟಿ ಲಿಪೊಪ್ರೋಟೀನ್) ಎರಡನೆಯದು "ಕೆಟ್ಟ ಕೊಲೆಸ್ಟ್ರಾಲ್" ಎಂದು ಹೇಳಲಾದ LDL (LDL ಕಡಿಮೆ-ಡೆನ್ಸಿಟಿ ಲಿಪೊಪ್ರೋಟೀನ್).

ಇನ್ನೂ HDL ಕೊಲೆಸ್ಟ್ರಾಲ್ ನಮ್ಮ ದೇಹಕ್ಕೆ ಪ್ರಯೋಜನಕಾರಿ ಏಕೆಂದರೆ ಇದು ಅಪಧಮನಿಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಿ ಯಕೃತ್ತಿಗೆ ಸಾಗಿಸುತ್ತದೆ. ಇದು ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ನಿಮ್ಮ ಆಹಾರದಲ್ಲಿ ಕೆಲವು ವಿಶೇಷ ಆಹಾರಗಳನ್ನು ಸೇರಿಸಿಕೊಳ್ಳುವುದು ಬಹಳ ಮುಖ್ಯ. ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುವ 5 ಆಹಾರಗಳ ಬಗ್ಗೆ ತಿಳಿಯೋಣ.

ರಕ್ತದಲ್ಲಿನ ಉತ್ತಮ ಕೊಲೆಸ್ಟ್ರಾಲ್ 60 mg/dL ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಇದನ್ನು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ಒಟ್ಟು 40 mg/dL ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಇದು ತುಂಬಾ ಕಡಿಮೆ ಎಂದು ಪರಿಗಣಿಸಲಾಗುತ್ತದೆ ಇದರಿಂದ ಹೃದಯದ ಆರೋಗ್ಯವು ಹದಗೆಡಬಹುದು ಎಂದು ಹೇಳಲಾಗಿದೆ.

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸುವ ಆಹಾರಗಳು:

ಕೊಬ್ಬಿನ ಮೀನುಗಳು ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿವೆ, ಇದು HDL ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಆರೋಗ್ಯಕ್ಕೂ ಸಹ ಒಳ್ಳೆಯದು.

ಮೀನು

ಓಟ್ಸ್ ಕರಗುವ ನಾರಿನಂಶವನ್ನು ಹೊಂದಿದ್ದು, ಇದು ಕೆಟ್ಟ ಕೊಲೆಸ್ಟ್ರಾಲ್ (LDL) ಅನ್ನು ಕಡಿಮೆ ಮಾಡಲು ಮತ್ತು ಒಳ್ಳೆಯ ಕೊಲೆಸ್ಟ್ರಾಲ್ (HDL) ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಓಟ್ಸ್ ಮತ್ತು ಧಾನ್ಯಗಳು

ಬಾದಾಮಿ, ವಾಲ್ನಟ್ಸ್, ಪಿಸ್ತಾ ಬೀಜಗಳು ಆರೋಗ್ಯಕರ ಕೊಬ್ಬುಗಳು, ಫೈಬರ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಇದು HDL ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಒಂದು ಹಿಡಿ ಡ್ರೈ ಫ್ರೂಟ್ಸ್​ಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವು ಸುಧಾರಿಸುತ್ತದೆ.

ಡ್ರೈ ಫ್ರೂಟ್ಸ್​ಗಳು

ಆಲಿವ್ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಇದರಲ್ಲಿ ಮೊನೊಸಾಚುರೇಟೆಡ್ ಎಂಬ ಕೊಬ್ಬುಗಳಿವೆ. ಇದು HDL ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಆಲಿವ್ ಎಣ್ಣೆ

(ಏಜೆನ್ಸೀಸ್)

ಆವಕಾಡೊದಲ್ಲಿ ಮೊನೊಸಾಚುರೇಟೆಡ್ ಕೊಬ್ಬುಗಳು ಮತ್ತು ಫೈಬರ್ ಇದ್ದು, ಇದು HDL ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಆವಕಾಡೊ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net