ಮೀನು ಆರೋಗ್ಯಕರ ಮಾಂಸಗಳಲ್ಲಿ ಒಂದು. ಇದರಲ್ಲಿ ನೈಸರ್ಗಿಕವಾಗಿ ಕಂಡುಬರುವ ಒಮೆಗಾ-3 ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯ, ಮಿದುಳಿನ ಬೆಳವಣಿಗೆ ಮತ್ತು ಮೆಮೋರಿ ಪವರ್ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ತಜ್ಞರು ಹೇಳುತ್ತಾರೆ. ಮೀನು ಮಕ್ಕಳು, ವೃದ್ಧರು ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುವವರಿಗೆ ಹೆಚ್ಚು ಸೂಕ್ತವಾಗಿದೆ. ಏಕೆಂದರೆ, ಮೀನು ಕೋಳಿ ಮಾಂಸಕ್ಕಿಂತ ವೇಗವಾಗಿ ಜೀರ್ಣವಾಗುತ್ತದೆ. ಅಲ್ಲದೆ, ಅದರಲ್ಲಿರುವ ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ. ಒಟ್ಟಾರೆಯಾಗಿ, ಕೋಳಿ ಮತ್ತು ಮೀನು ಎರಡೂ ವಿಶಿಷ್ಟ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.