ಮೊದಲು ಒಂದು ಪ್ಯಾನ್ಗೆ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ. ನಂತರ ಅದಕ್ಕೆ ಈರುಳ್ಳಿ ಹಾಕಿ ಚಿನ್ನದ ಬಣ್ಣ ಬರುವವರೆಗೂ ಹುರಿದುಕೊಳ್ಳಿ. ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಟೊಮೆಟೊ ತುಂಡುಗಳನ್ನು ಹಾಕಿ ಮೆತ್ತಗಾಗುವವರೆಗೆ ಬೇಯಿಸಿಕೊಳ್ಳಿ. ಈ ಮಿಶ್ರಣಕ್ಕೆ ಅರಿಶಿನ, ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲಾ, ಉಪ್ಪು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.