ಮೊದಲು ಚಿಕನ್ ತೊಳೆದು ಅದಕ್ಕೆ ಮೊಸರು, ಅರಿಶಿನ, ನಿಂಬೆ ರಸ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕನಿಷ್ಠ 1 ಗಂಟೆ ನೆನೆಯಲು ಬಿಡಿ. ನಂತರ ಒಂದು ಬಾಣಲೆಗೆ ಒಣ ಮೆಣಸಿನಕಾಯಿ, ಕೊತ್ತಂಬರಿ, ಜೀರಿಗೆ, ಕಾಳು ಮೆಣಸು ಮತ್ತು ಮೆಂತೆಯನ್ನು ಕಡಿಮೆ ಉರಿಯಲ್ಲಿ ಹುರಿದುಕೊಳ್ಳಿ. ಮಸಾಲೆ ಪದಾರ್ಥಗಳು ತಣ್ಣಗಾದ ನಂತರ ಮಿಕ್ಸಿಗೆ ಹಾಕಿಕೊಳ್ಳಿ. ನಂತರ ಅದಕ್ಕೆ ಬೆಳ್ಳುಳ್ಳಿ, ಹುಣಸೆಹಣ್ಣು ಮತ್ತು ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.