ಮೊದಲು ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಅದಕ್ಕೆ ಒಣ ಮೆಣಸಿನಕಾಯಿ, ಧನಿಯಾ, ಜೀರಿಗೆ, ಸಾಸಿವೆ, ಮೆಂತ್ಯ ಮತ್ತು ಕಾಳು ಮೆಣಸನ್ನು ಘಮ ಬರುವವರೆಗೆ ಹುರಿದುಕೊಳ್ಳಿ. ಇವು ತಣ್ಣಗಾದ ಮೇಲೆ ಮಿಕ್ಸಿ ಜಾರ್‌ಗೆ ಹಾಕಿ, ಜೊತೆಗೆ ಬೆಳ್ಳುಳ್ಳಿ, ಅರಿಶಿನ ಮತ್ತು ನೆನೆಸಿಟ್ಟ ಹುಣಸೆಹಣ್ಣನ್ನು ಸೇರಿಸಿ ಮಸಾಲೆ ದಪ್ಪವಾಗುವವರೆಗೆ ನುಣ್ಣಗೆ ರುಬ್ಬಿಕೊಳ್ಳಿ.