ಸೈಕಲ್ ಓಡಿಸುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ? health benefits of regular cycling

cycling
Published on

health benefits of regular cycling : ನಿಯಮಿತವಾಗಿ ಸೈಕ್ಲಿಂಗ್ ಮಾಡುವುದರಿಂದ  ಆರೋಗ್ಯಕ್ಕೆ ಅನೇಕ ಪ್ರಯೋಜಗಳು ಇವೆ.  ಪ್ರತಿದಿನ ಸೈಕ್ಲಿಂಗ್‌ ಮಾಡುವುದರಿಂದ  ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುತ್ತದೆ  ಎನ್ನುತ್ತಾರೆ ವೈದ್ಯಕೀಯ ತಜ್ಞರು.  ನಾವು ಈ ಕುರಿತಾಗಿ ಇಂದು ತಿಳಿದುಕೊಳ್ಳೋಣ....

ಸೈಕ್ಲಿಂಗ್ ಮಾಡುವುದರಿಂದ ದೇಹದಲ್ಲಿ ಎಂಡಾರ್ಫಿನ್ ಎಂಬ ಹಾರ್ಮೋನ್ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸೈಕ್ಲಿಂಗ್ ಸಹ ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ತೋರಿಸಿವೆ.

ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ನಿಯಮಿತ ಸೈಕ್ಲಿಂಗ್ ಉತ್ತಮ ವ್ಯಾಯಾಮ. ಸೈಕ್ಲಿಂಗ್ ಹೆಚ್ಚು ಕ್ಯಾಲೊರಿಗಳನ್ನು ಸುಡುತ್ತದೆ.

ಕೀಲು ಮತ್ತು ಮಂಡಿ ನೋವಿನಿಂದ ಬಳಲುತ್ತಿರುವವರು ವೈದ್ಯರ ಸಲಹೆಯಂತೆ ಸೈಕಲ್ ಓಡಿಸುವ ಅಭ್ಯಾಸ ಮಾಡಿಕೊಂಡರೆ ಆ ನೋವುಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.

ಪ್ರತಿನಿತ್ಯ ಸೈಕಲ್ ಓಡಿಸುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ. ಬಿಪಿ ಮತ್ತು ಕೊಲೆಸ್ಟ್ರಾಲ್ ಮಟ್ಟವು ನಿಯಂತ್ರಣದಲ್ಲಿದೆ.

ಸೈಕ್ಲಿಂಗ್ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡುತ್ತದೆ ನೀವು ಪ್ರತಿದಿನ ಸುಮಾರು 30 ನಿಮಿಷಗಳ ಕಾಲ ಸೈಕಲ್ ಮಾಡಿದರೆ, ಒಂದು ವರ್ಷದಲ್ಲಿ ನೀವು ಸುಮಾರು ಐದು ಕಿಲೋ ಕೊಬ್ಬನ್ನು ಕರಗಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net