ಕ್ಯಾಲ್ಸಿಯಂ ಕೊರತೆಯಿಂದ ಬಳಲುತ್ತಿದ್ದೀರಾ? ನಿಮ್ಮ ಆಹಾರಕ್ರಮದಲ್ಲಿ ಈ ಪದಾರ್ಥಗಳನ್ನು ಸೇರಿಸಿ.. | Health Tips

Untitled design - 2024-11-05T194606.320
Published on

ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುವುದರ ಜತೆಗೆ ಅವುಗಳನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಪ್ರಕಾರ, ಕ್ಯಾಲ್ಸಿಯಂ ಭರಿತ ಆಹಾರಗಳನ್ನು ಸೇವಿಸುವ ಮೂಲಕ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಬಹುದು. ನೀವು ಕ್ಯಾಲ್ಸಿಯಂ ಕೊರತೆಯನ್ನು ತಪ್ಪಿಸಲು ಬಯಸಿದರೆ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಹೊಂದಿರುವ ಆಹಾರವನ್ನು ಸೇವಿಸಬೇಕು. ಕ್ಯಾಲ್ಸಿಯಂ ಎತ್ತೆಚ್ಚವಾಗಿರುವ ಆಹಾರಗಳನ್ನು ಇಲ್ಲಿ ತಿಳಿಸಲಾಗಿದೆ.(Health Tips)

ಕ್ಯಾಲ್ಸಿಯಂಗಾಗಿ ಸೇವಿಸಬೇಕಾದ ಆಹಾರ ಪದಾರ್ಥಗಳು

ಚಿಯಾ ಸೀಡ್ಸ್​​

ಚಿಯಾ ಸೀಡ್ಸ್​ ಹೆಚ್ಚಿನ ಕ್ಯಾಲ್ಸಿಯಂ, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಫೈಬರ್ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಬಿಳಿ ಬೀನ್ಸ್

ಬಿಳಿ ಬೀನ್ಸ್ ಅತ್ಯಂತ ಪ್ರಯೋಜನಕಾರಿ ದ್ವಿದಳ ಧಾನ್ಯಗಳಲ್ಲಿ ಒಂದಾಗಿದೆ. ಹೆಚ್ಚಿನ ಪ್ರಮಾಣದ ಪ್ರೋಟೀನ್, ಫೈಬರ್ ಮತ್ತು ಅಗತ್ಯವಾದ ಖನಿಜಗಳು ಇದರಲ್ಲಿ ಕಂಡುಬರುತ್ತವೆ. ಬಿಳಿ ಬೀನ್ಸ್ ಮೂಳೆಗಳಿಗೆ ಕ್ಯಾಲ್ಸಿಯಂ ಭರಿತ ಆಹಾರಗಳಲ್ಲಿ ಒಂದಾಗಿದೆ. ಅವುಗಳ ಸೇವನೆಯು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಸೋಯಾ ಪನ್ನೀರ್​​

ಸೋಯಾ ಪನ್ನೀರ್​​ ಕ್ಯಾಲ್ಸಿಯಂನ ಅತ್ಯುತ್ತಮ ಮೂಲವಾಗಿದೆ ಮತ್ತು ಇದು ಮೀನಿಗಿಂತಲೂ ಹೆಚ್ಚು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದನ್ನು ಸೋಯಾದಿಂದ ತಯಾರಿಸಲಾಗುತ್ತದೆ. ಇದು ಕ್ಯಾಲ್ಸಿಯಂ ಮಾತ್ರವಲ್ಲದೆ ಮೆಗ್ನೀಸಿಯಮ್‌ನಂತಹ ಇತರ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಬ್ರೊಕೊಲಿ

ಬ್ರೊಕೊಲಿಯು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಬ್ರೊಕೊಲಿಯಲ್ಲಿ ಪ್ರೋಟೀನ್ ಕೂಡ ಕಂಡುಬರುತ್ತದೆ ಮತ್ತು ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಬೆಂಡೆಕಾಯಿ (ಲೇಡಿಫಿಂಗರ್)

ಬೆಂಡೆಕಾಯಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಅನ್ನು ಒದಗಿಸುತ್ತದೆ. ಇದು ಬಲವಾದ ಮೂಳೆಗಳಿಗೆ ಅವಶ್ಯಕವಾಗಿದೆ. ಮೂಳೆಗೆ ಸಂಬಂಧಿಸಿದ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ತರಕಾರಿಯನ್ನು ಸೇವಿಸುವುದರಿಂದ ನಿಮ್ಮ ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net