ನಮ್ಮಲ್ಲಿ ಬಹುತೇಕ ಪುರುಷರು ನಿಂತುಕೊಂಡೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಯಾವುದೇ ಸಿನಿಮಾ ಹಾಲ್ ಅಥವಾ ಸಾರ್ವಜನಿಕ ಶೌಚಾಲಯಗಳಿಗೆ ಹೋದರೂ ನಿಂತುಕೊಂಡೇ ಮೂತ್ರ ವಿಸರ್ಜನೆ ಮಾಡುವ ರೀತಿಯಲ್ಲೇ ಕಮೋಡ್ಗಳನ್ನು ಅಳವಡಿಸಿರುತ್ತಾರೆ. ಹೀಗಾಗಿ, ನಿಂತುಕೊಂಡು ಮೂರ್ತ ವಿಸರ್ಜನೆ ಮಾಡುವುದೇ ಸರಿಯಾದ ಕ್ರಮ ಎಂದು ಭಾವಿಸುತ್ತಾರೆ. ಆದರೆ, ಇದು ಸರಿಯಾದ ಕ್ರಮವಲ್ಲ ಎನ್ನುತ್ತಾರೆ ವೈದ್ಯರು. ನಿಂತುಕೊಂಡು ಮೂತ್ರ ವಿಸರ್ಜನೆ ಮಾಡುವ ಬದಲು, ಕುಳಿತು ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯರು ಮಹತ್ವದ ಸಲಹೆಯನ್ನು ನೀಡಿದ್ದಾರೆ.