

ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೀರಿಗೆಯನ್ನು ಬೆರೆಸಿ ಬೆಳಿಗ್ಗೆ ಎದ್ದು ಆ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ಮಹಿಳೆಯರು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ. ಅವುಗಳು ಏನು ಅಂತಾ ನೋಡ್ತಾ ಹೋಗೋದಾದ್ರೆ:
ಮಹಿಳೆಯರು ನಿತ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಇದು ತೂಕ ನಷ್ಟವನ್ನು ಪ್ರಚೋದಿಸುತ್ತದೆ. ಜೀರಿಗೆ ನೀರನ್ನು ಕುಡಿಯುವುದರಿಂದ ಮಹಿಳೆಯರು ಪಿಸಿಓಎಸ್ ಸೇರಿದಂತೆ ಮುಟ್ಟಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಜೀರ್ಣಕ್ರಿಯೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಅಂತರ ಕಾಯ್ದುಕೊಳ್ಳಬಹುದು. ಜೀರಿಗೆ ನೀರನ್ನು ಕುಡಿಯುವುದರಿಂದ ದೇಹವನ್ನು ಹೈಡ್ರೇಟ್ ಆಗಿರಿಸಲು ಜೊತೆಗೆ ದೇಹವನ್ನು ನಿರ್ವಿಷಗೊಳಿಸಲು ಸಹಕಾರಿ ಆಗುತ್ತದೆ.
ಜೀರಿಗೆ ವಾಟರ್ ಕುಡಿಯುವ ಅಭ್ಯಾಸ ಮಾಡಿಕೊಂಡವರಿಗೆ ದೇಹಕ್ಕೆ ಪೊಟ್ಯಾಶಿಯಂ ಸೇರುತ್ತದೆ. ಇದು ನಿಮ್ಮ ದೇಹದಲ್ಲಿ ಎಲೆಕ್ಟ್ರೋಲೈಟ್ ಬ್ಯಾಲೆನ್ಸ್ ಮಾಡುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ದೇಹದಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದಿಲ್ಲ.
ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣ ಹೊಂದಿರುವಂತಹ ಜೀರಿಗೆಯು ಉಸಿರಾಟದ ಸಮಸ್ಯೆಗೆ ತುಂಬಾ ಪರಿಣಾಮಕಾರಿ ಮನೆ ಮದ್ದು ಆಗಿದೆ.