ರಾಗಿ ಸೇವನೆಯಿಂದ ಆಗುವ ಆರೋಗ್ಯ ಲಾಭಗಳು ಸಾಕಷ್ಟಿವೆ, ಇದು ನೈಸರ್ಗಿಕ ಕಬ್ಬಿಣಾಂಶದ ಉತ್ತಮ ಮೂಲ

rfibal
Published on

ರಾಗಿ: ರಾಗಿ ಹಿಟ್ಟಿನಲ್ಲಿ ಇತರ ಧಾನ್ಯಗಳಿಗಿಂತ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಸಂಶೋಧನೆಯ ಪ್ರಕಾರ, 100 ಗ್ರಾಂ ರಾಗಿಯಲ್ಲಿ 344 ಮಿ. ಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಮೂಳೆಗಳು ಮತ್ತು ಹಲ್ಲುಗಳಿಗೆ ಕ್ಯಾಲ್ಸಿಯಂ ಬಹಳ ಮುಖ್ಯ. ಆಸ್ಟಿಯೊಪೊರೋಸಿಸ್​ನಂತಹ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕ್ಯಾಲ್ಸಿಯಂ ಅವಶ್ಯಕವಾಗಿದೆ. ಕ್ಯಾಲ್ಸಿಯಂ ಸಮೃದ್ಧವಾಗಿರುವುದರಿಂದ ರಾಗಿ ಸೇವಿಸುವುದು ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ತುಂಬಾ ಒಳ್ಳೆಯದು. ಚಳಿಗಾಲದಲ್ಲಿ, ನಿಮ್ಮ ಆಹಾರ ಪದ್ದತಿಯಲ್ಲಿ ರಾಗಿಯಿಂದ ಮಾಡಿದ ಆಹಾರವನ್ನು ಸೇರಿಸುವುದು ಉತ್ತಮ.


ರಾಗಿ ಫೈಬರ್​ ಅಂಶ ಕೂಡ ಸಮೃದ್ಧವಾಗಿದೆ. ಇದು ಆಹಾರದ ಹಂಬಲವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಜೀರ್ಣಕ್ರಿಯೆಯ ವೇಗವನ್ನು ಕಾಪಾಡಿಕೊಳ್ಳುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ರಾಗಿ ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳು ಚಳಿಗಾಲದಲ್ಲಿ ರಾಗಿ ಹಿಟ್ಟಿನಿಂದ ಮಾಡಿದ ರೊಟ್ಟಿಗಳನ್ನು ತಿನ್ನಲು ಸೂಚಿಸಲಾಗುತ್ತದೆ.


ರಾಗಿ ಆಹಾರ ಸೇವನೆಯು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಯೌವ್ವನವನ್ನು ಕಾಪಾಡಿಕೊಳ್ಳಲು ರಾಗಿ ಆಹಾರ ಉತ್ತಮ. ಇದರಲ್ಲಿರುವ ಮೆಥಿಯೋನಿನ್ ಮತ್ತು ಲೈಸಿನ್ ನಂತಹ ಅಗತ್ಯವಾದ ಅಮೈನೊ ಆಸಿಡ್ ಅಂಶಗಳು ಚರ್ಮದ ಅಂಗಾಂಶಗಳನ್ನು ಸುಕ್ಕುಗಳು ಮತ್ತು ವಯಸ್ಸಾದ ಚಿಹ್ನೆಗಳಿಂದ ರಕ್ಷಿಸುತ್ತದೆ. ಇದಲ್ಲದೆ, ರಾಗಿ ಸೇವನೆ ಮೂಲಕ ದೇಹದಲ್ಲಿನ ವಿಟಮಿನ್ ಡಿ ಕೊರತೆಯನ್ನು ನೀಗಿಸಬಹುದು.


: ರಾಗಿ ನೈಸರ್ಗಿಕ ಕಬ್ಬಿಣಾಂಶದ ಉತ್ತಮ ಮೂಲವಾಗಿದೆ. ಇದು ರಕ್ತಹೀನತೆಯಿಂದ ಬಳಲುತ್ತಿರುವ ರೋಗಿಗಳಿಗೆ ಮತ್ತು ಕಡಿಮೆ ಹಿಮೋಗ್ಲೋಬಿನ್ ಮಟ್ಟವನ್ನು ಹೊಂದಿರುವ ಜನರಿಗೆ ವರದಾನವಾಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿ ಕಬ್ಬಿಣಾಂಶವನ್ನು ತುಂಬಲು ನೀವು ರಾಗಿಯನ್ನು ಸೇವಿಸುವುದು ಉತ್ತಮ. ಇದನ್ನು ಹಿಟ್ಟು, ಮೊಳಕೆ ಅಥವಾ ಇನ್ನಾವುದೇ ಖಾದ್ಯವಾಗಿ ಬಳಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net