

ಸ್ತನ ಕ್ಯಾನ್ಸರ್ ವಿಶ್ವಾದ್ಯಂತ ಮಹಿಳೆಯರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. ಋತುಚಕ್ರದ ಬಳಿಕ ಯಾವುದೇ ವಯಸ್ಸಿನ ಹೆಣ್ಣುಮಕ್ಕಳಿಗೆ ಬರುವ ಭಯಾನಕ ಕಾಯಿಲೆ ಆಗಿದೆ. ಆದರೆ ಕೆಲವು ಜೀವನಶೈಲಿ ಅಭ್ಯಾಸಗಳು ರೋಗದ ಬೆಳವಣಿಗೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಉತ್ತಮ ಜೀವನ ಶೈಲಿಯು ನಿಮ್ಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮದ ಪ್ರತಿಯೊಂದು ಅಂಶದ ಮೇಲೆ ಪರಿಣಾಮ ಬೀರುತ್ತದೆ. ಸ್ತನ ಕ್ಯಾನ್ಸರ್ ಕಡಿಮೆ ಮಾಡಿಕೊಳ್ಳಲಿ ಇರುವ ಕೆಲವು ಮಾರ್ಗಗಳನ್ನು ಇಲ್ಲಿ ತಿಳಿಸಲಾಗಿದೆ