

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೂ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಸ್ವತಃ ಪ್ರಮೋದ್ ಸಾವಂತ್ ಅವರೇ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿ ಇದ್ದೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ ಎಂದಿದ್ದಾರೆ.
ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವಿಟರ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಗೋವಾ ರಾಜ್ಯದಲ್ಲಿ ಇದುವರೆಗೆ 17,418 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.