ಬೇಸಿಗೆಯಲ್ಲಿ ದಿನನಿತ್ಯ ಒಂದು ಲೋಟ ಮಜ್ಜಿಗೆ ಕುಡಿದರೆ ಎಷ್ಟೆಲ್ಲಾ ಪ್ರಯೋಜನೆಗಳಿವೆ ನೋಡಿ…

butter milk
Published on

ಬೆಂಗಳೂರು: ಮಾರ್ಚ್​ ಮೊದಲ ವಾರದಲ್ಲಿ ಬಿಸಿಲ ಪ್ರತಾಪ ಶುರುವಾಗಿದೆ. ಇದು ಆರಂಭ ಮಾತ್ರ. ಈ ಬಾರಿಯ ಬೇಸಿಗೆ ಬಿರು ಬೇಸಿಗೆ ಆಗಲಿದೆ. ಯಾಕಂದ್ರೆ ಈ ಬಾರಿ ಸಾಮಾನ್ಯಕ್ಕಿಂತಲೂ ಹೆಚ್ಚು ತಾಪಮಾನ ಇರುತ್ತೆ ಅಂತಾ ಹವಾಮಾನ ತಜ್ಞರು ಹೇಳಿದ್ದಾರೆ.

ಈ ಬೇಸಿಗೆಯಿಂದ ನಮ್ಮ ದೇಹವನ್ನು ತಂಪಾಗಿರಿಸಿಕೊಳ್ಳಲು ದಿನನಿತ್ಯ ಮಜ್ಜಿಗೆ ಕುಡಿಯುವವರು ನೀವಾಗಿದ್ದರೆ ಸಂತೋಷಪಡಿ. ಆದರೆ ಮಜ್ಜಿಗೆ ಕುಡಿಯದವರು ಇಂದೇ ಕುಡಿಯಲು ಪ್ರಾರಂಭಿಸಿರಿ. ಆದರೆ ದೊಡ್ಡ ದೊಡ್ಡ ಕಾಯಿಲೆಗಳನ್ನು ಉಪಶಮನ ಮಾಡುವ ತಾಕತ್ತು ಮಜ್ಜಿಗೆಗಿದೆ.

ನಿಮಗೆ ಆಶ್ಚರ್ಯವಾಗಬಹುದು. ಆದರೆ ಇದು ನಿಜ. ಸಂಶೋಧನೆ ಮತ್ತು ಆಯುರ್ವೇದದ ಪ್ರಕಾರ ಮಜ್ಜಿಗೆ ಕುಡಿಯುವುದರಿಂದ ನೀವು ಊಹಿಸಿಕೊಳ್ಳಲು ಸಾಧ್ಯವಾಗದಷ್ಟು ಪ್ರಯೋಜನಗಳಿವೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ: ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಹೊರತಾಗಿ ವಿವಿಧ ಪ್ರೋಟೀನುಗಳು, ವಿಟಮಿನ್ ಬಿ, ಪೊಟ್ಯಾಸಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿವೆ. ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ರಕ್ತದೊತ್ತಡ ನಿವಾರಣೆಗೆ: ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುವುದು ಹಾಗೂ ದೇಹಕ್ಕೆ ಹಲವು ರೀತಿಯ ಲಾಭಗಳಿವೆ.

ಒಂದು ಹೊತ್ತು ನೀವು ಮಜ್ಜಿಗೆ ಕುಡಿದರೆ ಉತ್ತಮ: ನಾವು ಆಧುನೀಕರಣಕ್ಕೆ ಹೊಂದಿಕೊಂಡು ಮಜ್ಜಿಗೆಯಂತಹ ಆರೋಗ್ಯಕಾರಿ ಪಾನೀಯವನ್ನು ಕಡೆಗಣಿಸಿ, ತಂಪು ಪಾನೀಯ ಗಳನ್ನು ಊಟವಾದ ಬಳಿಕ ಕುಡಿಯುತ್ತಿದ್ದೇವೆ. ಇದು ಆರೋಗ್ಯಕ್ಕೆ ತುಂಬಾ ಮಾರಕ. ಇದರ ಬದಲು ಮಜ್ಜಿಗೆ ಕುಡಿದರೆ ಅದರಿಂದ ದೇಹವು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ತುಂಬಾ ಸೆಕೆ ಅಥವಾ ಉಷ್ಣತೆ ಇರುವ ಸಂದರ್ಭದಲ್ಲಿ ಇದು ದೇಹಕ್ಕೆ ಶಮನ ನೀಡುವುದು. ಎರಡು ಹೊತ್ತಿನ ಊಟ ಮಾಡುವ ಸಂದರ್ಭ ದಲ್ಲಿ ಒಂದು ಹೊತ್ತು ನೀವು ಮಜ್ಜಿಗೆ ಕುಡಿದರೆ ಅದು ನಿಮ್ಮ ಆರೋಗ್ಯ ಕಾಪಾಡುವುದರಲ್ಲಿ ಯಾವುದೇ ಸಂಶಯವಿಲ್ಲ.

ಜೀರ್ಣಕ್ರಿಯೆ ಸುಧಾರಿಸುವುದು: ಶುಂಠಿ, ಕಾಳುಮೆಣಸು ಮತ್ತು ಜೀರಿಗೆ, ಹಸಿ ಮೆಣಸುವ ಹಾಕಿಕೊಂಡು ಮಜ್ಜಿಗೆ ತಯಾರಿಸಿದರೆ ಆಗ ಅದು ರುಚಿಕರವಾಗಿರುವುದು ಮಾತ್ರವಲ್ಲದೆ ಜೀರ್ಣಕ್ರಿಯೆ ವ್ಯವಸ್ಥೆಗೆ ನೆರವಾಗುವುದು. ಇದು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಲು ಮತ್ತು ಹೊಟ್ಟೆಯ ಪದರಕ್ಕೆ ಶಮನ ನೀಡುವುದು. ಅಜೀರ್ಣ ಮತ್ತು ದೇಹದ ಉಷ್ಣತೆ ಕಡಿಮೆ ಮಾಡಲು ಇದು ಅತ್ಯುತ್ತಮ ಪಾನೀಯವಾಗಿದೆ.

ದೇಹದ ತಾಪಮಾನವನ್ನು ತಣಿಸುತ್ತದೆ: ಬೇಸಿಗೆಯ ಬಿಸಿಯಲ್ಲಿ ದೇಹವೂ ಬಿಸಿಯಾಗತೊಡಗುತ್ತದೆ. ಇದನ್ನು ತಣಿಸಲು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆವರು ಹರಿಯಬೇಕಾಗುತ್ತದೆ. ಆಗ ದೇಹದಿಂದ ನಷ್ಟವಾಗುವ ನೀರನ್ನು ಬೇಗನೇ ಭರ್ತಿಮಾಡಿಕೊಳ್ಳದೇ ಇದ್ದರೆ ದ್ರವದ ಪ್ರಮಾಣ ಕಡಿಮೆಯಾಗಿ ದೇಹ ಹೆಚ್ಚು ಬಿಸಿಯಾಗಲು ಕಾರಣವಾಗುತ್ತದೆ. ಮಜ್ಜಿಗೆಯ ಸೇವನೆ ಈ ತೊಂದರೆಯಿಂದ ತಡೆಯುತ್ತದೆ ಹಾಗೂ ದೇಹವನ್ನು ತಂಪಾಗಿಡಲು ನೆರವಾಗುತ್ತದೆ.

ನಿಮ್ಮನ್ನು ಹೈಡ್ರೇಟೆಡ್ ಆಗಿರಿಸುತ್ತದೆ : ವಿಶೇಷವಾಗಿ ಉಷ್ಣತೆಯ ಸಮಯದಲ್ಲಿ ನಿಮ್ಮ ದೇಹವನ್ನು ತೇವಾಂಶದಿಂದ ಇಡಲು ಇದು ಸೂಕ್ತವಾದ ಪಾನೀಯವಾಗಿದೆ. ನಿರ್ಜಲೀಕರಣವು ವಿವಿಧ ಕಾಯಿಲೆಗಳು ಮತ್ತು ಒಟ್ಟಾರೆ ಅಸ್ವಸ್ಥತೆಯನ್ನು ಉಂಟುಮಾಡಬಹುದು. ಹೆಚ್ಚಿನ ಎಲೆಕ್ಟ್ರೋಲೈಟ್ ಅಂಶದಿಂದಾಗಿ, ಮಜ್ಜಿಗೆ ನಿಮ್ಮ ದೇಹವು ನೀರನ್ನು ಕಳೆದುಕೊಳ್ಳದಂತೆ ತಡೆಯುತ್ತದೆ. ಪರಿಣಾಮವಾಗಿ, ಇದು ನೈಸರ್ಗಿಕವಾಗಿ ನಿಮ್ಮ ದೇಹವನ್ನು ತೇವಗೊಳಿಸುತ್ತದೆ ಮತ್ತು ಮುಳ್ಳು ಶಾಖದಂತಹ ಬೇಸಿಗೆಯ ಕಾಯಿಲೆಗಳಿಂದ ರಕ್ಷಿಸುತ್ತದೆ.

ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರುವುದರಿಂದ ಇವು ಹೊಟ್ಟೆಯಲ್ಲಿ ಉರಿ, ಅಮ್ಮಿಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಮಿಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಕಡಿಮೆಯಾಗುತ್ತದೆ.

ಮಲಬದ್ಧತೆಯನ್ನು ನಿವಾರಿಸುತ್ತದೆ : ಮಲಬದ್ಧತೆ ಮತ್ತು ಸಂಬಂಧಿತ ಸಮಸ್ಯೆಗಳನ್ನು ತಡೆಗಟ್ಟಲು ಮಜ್ಜಿಗೆ ಮತ್ತೊಂದು ನೈಸರ್ಗಿಕ ಪರಿಹಾರವಾಗಿದೆ. ಹೆಚ್ಚಿನ ಫೈಬರ್ ಅಂಶದಿಂದಾಗಿ, ಮಜ್ಜಿಗೆ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ ಮತ್ತು ನೀವು ಅದನ್ನು ಪ್ರತಿದಿನ ಸೇವಿಸಿದರೆ ಸ್ಥಿತಿಯನ್ನು ಸುಗಮಗೊಳಿಸುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net