ಜಾಯಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನೆ ಇದೆ ಗೊತ್ತಾ? ಉತ್ತಮ ಆರೋಗ್ಯಕ್ಕಾಗಿ ಈ ಟಿಪ್ಸ್​​​

Untitled-design-2024-08-19T205022.873
Published on

ಜಾಯಿಕಾಯಿ ಒಂದು ಮಸಾಲೆ ಪದಾರ್ಥ. ಇದನ್ನು ಮಸಾಲೆ ಪದಾರ್ಥ ಅಷ್ಟೆ ಎಂದು ಪರಿಗಣಿಸಬೇಡಿ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿ ಜಾಯಿಕಾಯಿಯನ್ನು ಶತಮಾನಗಳಿಂದ ಬಳಸಲಾಗುತ್ತಿದೆ. ಇದು ನರಮಂಡಲದ ಮೇಲೆ ಪರಿಣಾಮ ಬೀರುವ ಕೆಲವು ರಾಸಾಯನಿಕ ಅಂಶಗಳನ್ನು ಒಳಗೊಂಡಿದೆ. ಜಾಯಿಕಾಯಿ ದೇಹದಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾ ಮತ್ತು ಫಂಗಸ್ ಅನ್ನು ಸಹ ತೆಗೆದುಹಾಕುತ್ತದೆ. ಹಾಗಾದ್ರೆ ಜಾಯಿಕಾಯಿಯಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದನ್ನು ತಿಳಿಯೋಣ ಬನ್ನಿ..

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಜಾಯಿಕಾಯಿಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಜಾಯಿಕಾಯಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮ್ಯಾಂಗನೀಸ್ ಅಂಶವು ಇದೆ. ಹೃದಯವನ್ನು ಆರೋಗ್ಯಕರವಾಗಿಡುತ್ತದೆ.

ನಿದ್ರಾಹೀನತೆ ಕಡಿಮೆಯಾಗುತ್ತದೆ: ಜಾಯಿಕಾಯಿಯು ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುವ ಅನೇಕ ಗುಣಗಳನ್ನು ಹೊಂದಿದೆ. ಮಲಗುವ ಮುನ್ನ ಸ್ವಲ್ಪ ಜಾಯಿಕಾಯಿ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ಕುಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ. ಪುಡಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿ

ಮೆದುಳಿನ ಆರೋಗ್ಯ ಸುಧಾರಿಸಲು ಸಹಕಾರಿ: ಜಾಯಿಕಾಯಿಯಲ್ಲಿರುವ ಮಿರಿಸ್ಟಿಸಿನ್ ಮತ್ತು ಮೈಸೆಲಿನ್ ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನೆನಪಿನ ಶಕ್ತಿಯನ್ನು ಹೆಚ್ಚಿಸುವುದರ ಜತೆಗೆ ಮಾನಸಿಕ ಆಯಾಸ ತೆಗೆದುಹಾಕಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಜಾಯಿಕಾಯಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಬಳಸಲಾಗುತ್ತದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುವುದರ ಮೂಲಕ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯ ಉತ್ತಮಗೊಳಿಸುತ್ತದೆ: ಜಾಯಿಕಾಯಿಯಲ್ಲಿರುವ ಆ್ಯಂಟಿಮೈಕ್ರೊಬಿಯಲ್ ಮತ್ತು ಉರಿಯೂತ ನಿವಾರಕ ಗುಣಗಳು ತ್ವಚೆಗೆ ಪ್ರಯೋಜನವನ್ನು ನೀಡುತ್ತದೆ. ಜಾಯಿಕಾಯಿ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಮೊಡವೆಗಳು ಮತ್ತು ಮುಖದಲ್ಲಿನ ಕಲೆಗಳು ಕಡಿಮೆಯಾಗುತ್ತವೆ. ಮೈಬಣ್ಣವನ್ನು ಸ್ವಲ್ಪ ಸುಧಾರಿಸುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net