ಹಲ್ಲು ಉಜ್ಜುವುದರ ಜೊತೆಗೆ ನಾಲಿಗೆ ಕ್ಲೀನ್​ ಮಾಡುವುದು ಎಷ್ಟು ಮುಖ್ಯ? ಇಲ್ಲಿದೆ ಉಪಯುಕ್ತ ಮಾಹಿತಿ... Tongue

Tongue
Published on

Tongue : ನಮ್ಮ ನಾಲಿಗೆಯ ಕಾರ್ಯವೆಂದರೆ ಕೇವಲ ರುಚಿಯನ್ನು ಗ್ರಹಿಸುವುದು ಮಾತ್ರವಲ್ಲ, ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಅದನ್ನು ಬಹಿರಂಗಪಡಿಸುತ್ತದೆ. ದೇಹದಲ್ಲಿ ಅತಿ ಹೆಚ್ಚು ಬ್ಯಾಕ್ಟೀರಿಯಾಗಳು ವಾಸಿಸುವ ಸ್ಥಳವೆಂದರೆ, ಅದು ಬಾಯಿ. ಹಾಗಾಗಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ನಮ್ಮ ದೇಹದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡಾಗ ಮೊದಲು ಗೋಚರಿಸುವುದು ನಾಲಿಗೆ ಮೇಲೆ ಎಂಬುದನ್ನು ನೆನಪಿನಲ್ಲಿಡಿ.

ನಾಲಿಗೆಯ ಬಣ್ಣವನ್ನು ಆಧರಿಸಿ ನಾವು ಯಾವ ಸಮಸ್ಯೆಯಿಂದ ಬಳಲುತ್ತಿದ್ದೇವೆ ಎಂಬುದನ್ನು ವೈದ್ಯರು ಹೇಳುವುದನ್ನು ನೀವು ನೋಡಿರುತ್ತೀರಿ. ಹೀಗಾಗಿ ನಾಲಿಗೆಯನ್ನು ಯಾವಾಗಲೂ ಸ್ವಚ್ಛಗೊಳಿಸಿ, ಆರೋಗ್ಯದಿಂದ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ.

ಬಾಯಿಯ ನೈರ್ಮಲ್ಯಕ್ಕೆ ನಿಮ್ಮ ನಾಲಿಗೆಯನ್ನು ಸ್ವಚ್ಛಗೊಳಿಸುವುದು ಅತ್ಯಗತ್ಯ. ಹಲ್ಲುಗಳ ಹುಳುಕು ಮತ್ತು ಒಸಡು ಕಾಯಿಲೆಗೆ ಕಾರಣವಾಗುವ ಬ್ಯಾಕ್ಟೀರಿಯಾಗಳು ನಾಲಿಗೆಯ ಮೇಲೆ ವಾಸಿಸುತ್ತವೆ. ಆದ್ದರಿಂದ, ನಿಮ್ಮ ನಾಲಿಗೆಯನ್ನು ಪ್ರತಿದಿನ ಸ್ವಚ್ಛಗೊಳಿಸುವುದರಿಂದ ಬ್ಯಾಕ್ಟೀರಿಯಾಗಳು ನಿವಾರಣೆಯಾಗುತ್ತವೆ ಮತ್ತು ಹಲ್ಲು ಹುಳುಕು ಮತ್ತು ಒಸಡು ಕಾಯಿಲೆ ಕಡಿಮೆಯಾಗುತ್ತದೆ. ಇದಲ್ಲದೆ, ಬಾಯಿಯ ದುರ್ವಾಸನೆಯನ್ನು ತಪ್ಪಿಸಲು ನಿಮ್ಮ ನಾಲಿಗೆಯನ್ನು ಸ್ವಚ್ಛಗೊಳಿಸುವುದು ಅತ್ಯಗತ್ಯ.

ಸ್ವಚ್ಛತೆ ಇಲ್ಲದಿರುವುದರಿಂದ ಬರುವ ರೋಗಗಳು

ಕೊಳಕು ನಾಲಿಗೆಯು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನಾಲಿಗೆ ಕಪ್ಪು ಬಣ್ಣದ್ದಾಗಿದ್ದು, ಅದರ ಮೇಲೆ ಬಿಳಿ ಉಬ್ಬುಗಳಿದ್ದರೆ, ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಕೆಟ್ಟ ಸ್ಥಿತಿಯಲ್ಲಿದೆ ಎಂದು ಸೂಚಿಸುತ್ತದೆ. ನಿಮ್ಮ ನಾಲಿಗೆ ತುಂಬಾ ಮೃದುವಾಗಿದ್ದರೆ, ಅದು ಕಬ್ಬಿಣದ ಕೊರತೆಯನ್ನು ಸೂಚಿಸುತ್ತದೆ ಮತ್ತು ನೀವು ರಕ್ತಹೀನತೆಯಿಂದ ಬಳಲುತ್ತಿರಬಹುದು. ಕೆಲವೊಮ್ಮೆ, ಈ ಲಕ್ಷಣಗಳು ವಿಟಮಿನ್ ಕೊರತೆಯಿಂದಲೂ ಉಂಟಾಗುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಸಾಕಷ್ಟು ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಸೇವಿಸುವುದು ಮುಖ್ಯ. ಕೆಲವೊಮ್ಮೆ, ಕೆಲವರ ನಾಲಿಗೆಯಲ್ಲಿ ಬಿರುಕುಗಳು ಉಂಟಾಗುತ್ತವೆ. ಮೂತ್ರಪಿಂಡದ ಕಾಯಿಲೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಬಾರದೆ ಹೋದಾಗ ಇದು ಸಂಭವಿಸುತ್ತದೆ. ಈ ಸಮಸ್ಯೆಯನ್ನು ನಿರ್ಲಕ್ಷಿಸುವುದರಿಂದ ಅನೇಕ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ, ನಿಮ್ಮ ನಾಲಿಗೆಯ ಸ್ಥಿತಿಯಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್​ ನೆಟ್​” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net