ಪ್ರತಿದಿನ 4 ನೆನಸಿದ ಬಾದಾಮಿಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು?| almonds

almonds
Published on

Almonds: ದಿನನಿತ್ಯ 4 ಬಾದಾಮಿ ಸೇವಿಸುವುದರಿಂದ ಆರೋಗ್ಯದಲ್ಲಿ ಅನೇಕ ಪ್ರಯೋಜನಗಳನ್ನು ನೀಡುತ್ತದೆ.ಬಾದಾಮಿಯಲ್ಲಿರುವ ಪೋಷಕಾಂಶಗಳು ದೇಹದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹಾಗೇ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ದೂರ ಮಾಡುತ್ತದೆ.

ದಿನಕ್ಕೆ 4-6 ನೆನೆಸಿದ ಬಾದಾಮಿಗಳನ್ನು ತಿನ್ನುವುದು ಸಾಮಾನ್ಯವಾಗಿ ಒಳ್ಳೆಯದು, ಆದರೆ ಅತಿಯಾದ ಸೇವನೆಯಿಂದ ಕ್ಯಾಲರಿಗಳು ಹೆಚ್ಚಾಗಬಹುದು. ಯಾವುದೇ ಆರೋಗ್ಯ ಸಮಸ್ಯೆಗೆ ಚಿಕಿತ್ಸೆಯಾಗಿ ಬಾದಾಮಿಯನ್ನು ಬಳಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.

ನೆನಸಿದ ಬಾದಾಮಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು?

* ಮೆದುಳಿನ ಆರೋಗ್ಯ

ನೆನೆಸಿದ ಬಾದಾಮಿಯಲ್ಲಿ ರಿಬೋಫ್ಲಾವಿನ್ (ವಿಟಮಿನ್ B2) ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಇವು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸಿ, ಸ್ಮರಣ ಶಕ್ತಿಯನ್ನು ಉತ್ತೇಜಿಸುತ್ತದೆ. ಇವು ಮಕ್ಕಳಿಗೆ ವಯಸ್ಸಾದವರಿಗೆ ವಿಶೇಷವಾಗಿ ಪ್ರಯೋಜನಗಳನ್ನು ನೀಡುತ್ತದೆ.

* ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ

ಬಾದಾಮಿಯ ಚರ್ಮದಲ್ಲಿರುವ ಟ್ಯಾನಿನ್‌ಗಳು ನೆನೆಸಿದಾಗ ಕಡಿಮೆಯಾಗುತ್ತವೆ, ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.ಅದರೊಂದಿಗೆ ಇದರಲ್ಲಿರುವ ಫೈಬರ್ ಅಂಶವು ಮಲಬದ್ಧತೆಯನ್ನು ತಡೆಗಟ್ಟುತ್ತದೆ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.

* ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಬಾದಾಮಿಯಲ್ಲಿರುವ ಮೊನೊಸ್ಯಾಚುರೇಟೆಡ್ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗೂ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ತಗ್ಗಿಸುತ್ತವೆ. ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಂನಂತಹ ಖನಿಜಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ.

* ರಕ್ತದೊತ್ತಡ ನಿಯಂತ್ರಣ

ಬಾದಾಮಿಯಲ್ಲಿರುವ ಪೊಟ್ಯಾಸಿಯಂ ಮತ್ತು ಕಡಿಮೆ ಸೋಡಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯಕವಾಗಿದೆ.

* ತೂಕ ನಿರ್ವಹಣೆ

ಫೈಬರ್, ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಕೂಡಿದ ಬಾದಾಮಿ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ, ಏಕೆಂದರೆ ಇದು ದೀರ್ಘಕಾಲ ಹಸಿವನ್ನು ತಡೆಯುತ್ತದೆ.

* ಚರ್ಮ ಮತ್ತು ಕೂದಲಿನ ಆರೋಗ್ಯ ಕಾಪಾಡುತ್ತದೆ

ವಿಟಮಿನ್ E ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿಡುತ್ತವೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತವೆ.

ಮೂಳೆಗಳ ಆರೋಗ್ಯ ಕಾಪಾಡುತ್ತದೆ.  ನೆನಸಿದ ಬಾದಾಮಿಯನ್ನು ಸೇವಿಸುವುದರಿಂದ ಕ್ಯಾಲ್ಸಿಯಂ, ಮೆಗ್ನೀಸಿಯಂ ಮತ್ತು ಫಾಸ್ಫರಸ್​ಗಳು ಮೂಳೆಗಳನ್ನು ಬಲಪಡಿಸುತ್ತವೆ, ಆಸ್ಟಿಯೊಪೊರೋಸಿಸ್‌ನಂತಹ ಸಮಸ್ಯೆಗಳನ್ನು ತಡೆಯುತ್ತವೆ. (ಏಜೆನ್ಸೀಸ್​)

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net