ಸಂಜೆಯ ವೇಳೆ ವಾಕಿಂಗ್​ ಮಾಡುವುದರಿಂದ ಏನೆಲ್ಲ ಲಾಭವಿದೆ? ಇಲ್ಲಿದೆ ಉಪಯುಕ್ತ ಮಾಹಿತಿ... Walking

Walking
Published on

Walking : ನಡಿಗೆಯು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ದಿನಕ್ಕೆ ಕನಿಷ್ಠ ಸಾವಿರ ಹೆಜ್ಜೆಗಳನ್ನಾದರೂ ಇಡಬೇಕೆಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅನೇಕ ಜನರು ಬೆಳಗ್ಗೆ ಅಥವಾ ಸಂಜೆ ವೇಳೆ ಸ್ವಲ್ಪ ಸಮಯ ನಡೆಯುತ್ತಾರೆ. ಆದರೆ, ಬಹುತೇಕರು ಬೆಳಗಿನ ಸಮಯದಲ್ಲಿ ವಾಕಿಂಗ್​ ಮಾಡಲು ಬಯಸುತ್ತಾರೆ. ಬೆಳಗ್ಗೆ ಏಳಲು ಸಾಧ್ಯವಾಗದವರು ಹಾಗೂ ಬೆಳಗಿನ ಪಾಳಿಯಲ್ಲಿ ಕೆಲಸ ಮಾಡುವರು ಸಂಜೆ ವೇಳೆ ವಾಕಿಂಗ್ ಮಾಡಲು ಬಯಸುತ್ತಾರೆ.

ಬೆಳಗ್ಗೆ ವಾಕಿಂಗ್​ ಮಾಡಿದರೆ ಮಾತ್ರ ಆರೋಗ್ಯಕ್ಕೆ ಉತ್ತಮವೆಂದು ಅನೇಕರು ಭಾವಿಸಿದ್ದಾರೆ. ಆದರೆ, ಸಂಜೆ ವೇಳೆಯೂ ವಾಕಿಂಗ್​ ಮಾಡುವುದರಿಂದ ನೀವು ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು? ಯಾವ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬಹುದು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಸಂಜೆ ವಾಕಿಂಗ್ ಮಾಡುವುದು ಕೂಡ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಉತ್ತಮ ನಿದ್ದೆ ಬರುತ್ತದೆ. ಆಯಾಸ, ನಿದ್ರಾಹೀನತೆ ಮತ್ತು ಒತ್ತಡದಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಇಂದಿನ ಆಧುನಿಕ ಪ್ರಪಂಚದಲ್ಲಿ ಅನೇಕ ಜನರು ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಂತಹ ಜನರು ಸಂಜೆ ಸಮಯದಲ್ಲಿ ನಿಯಮಿತವಾಗಿ ವಾಕಿಂಗ್ ಮಾಡುವ ಮೂಲಕ ಒತ್ತಡವನ್ನು ನಿವಾರಿಸಬಹುದು. ಒತ್ತಡ ಕಡಿಮೆಯಾದರೆ ಸಹಜವಾಗಿಯೇ ನಿಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ.

ನಿತ್ಯವೂ ಸ್ನಾಯುಗಳನ್ನು ಸಡಿಲಗೊಳಿಸಬೇಕು. ಹೀಗಾಗಿ ದಿನನಿತ್ಯ ವ್ಯಾಯಾಮ ಮಾಡುವುದು ಒಳ್ಳೆಯದು. ಪ್ರತಿದಿನ ಸಂಜೆ ವ್ಯಾಯಾಮ ಮಾಡುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದರಿಂದ ಅನೇಕ ರೀತಿಯ ರೋಗಗಳನ್ನು ಕಡಿಮೆ ಮಾಡಬಹುದು. ಬಹಳ ಮುಖ್ಯವಾಗಿ ನಿಮ್ಮ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಂಜೆ ವೇಳೆ ಮಾಡುವ ವಾಕಿಂಗ್ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿರುವವರು ಸಂಜೆ ವೇಳೆ ನಿಯಮಿತವಾಗಿ ವಾಕಿಂಗ್ ಮಾಡುವುದರಿಂದ ತೂಕ ಇಳಿಸಿಕೊಳ್ಳಬಹುದು.

ಪ್ರತಿದಿನ ಅರ್ಧ ಗಂಟೆ ವ್ಯಾಯಾಮ ಮಾಡುವುದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ. ನಿಮಗೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ. ಅಲ್ಲದೆ, ನಿಮ್ಮ ಮೂಡ್ ಕೂಡ ಚೆನ್ನಾಗಿರುತ್ತದೆ. ಹಾಗಾಗಿ ಸಾಧ್ಯವಾದಷ್ಟು ಸಂಜೆ ಅಥವಾ ಮುಂಜಾನೆ ನಡೆಯುವುದನ್ನು ರೂಢಿಸಿಕೊಳ್ಳಿ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net