ಚಳಿಗಾಲ ಬರ್ತಿದೆ ಆರೋಗ್ಯದ ಬಗ್ಗೆ ಎಚ್ಚರವಿರಲಿ! ಈ ಆಹಾರಗಳನ್ನು ತಪ್ಪದೇ ಸೇವಿಸಿದ್ರೆ ಅನಾರೋಗ್ಯ ಕಾಡಲ್ಲ | Winter

Winter
Published on

ಹವಾಮಾನ ಬದಲಾದಂತೆ ತಿನ್ನುವ ಆಹಾರ ( Food ) ಗಳ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ. ಬೇಸಿಗೆ ( Summer ) ಯಲ್ಲಿ ತಿನ್ನಬೇಕಾದ ಆಹಾರಗಳನ್ನು ಚಳಿಗಾಲ ( Winter ) ದಲ್ಲಿ ತಿನ್ನುವುದು ದೇಹಕ್ಕೆ ಒಳ್ಳೆಯದಲ್ಲ. ಇದರಿಂದ ಅನಾರೋಗ್ಯ ಕಾಡುತ್ತದೆ. ಹವಾಮಾನದಲ್ಲಿನ ಬದಲಾವಣೆಗೆ ಅನುಗುಣವಾಗಿ ದೇಹವನ್ನು ತಲುಪುವ ಪೌಷ್ಟಿಕಾಂಶದಲ್ಲಿಯೂ ಬದಲಾವಣೆಗಳನ್ನು ಮಾಡುವ ಅವಶ್ಯಕತೆಯಿದೆ.

ಉದಾಹರಣೆಗೆ ಶೀತ ಋತುವಿನಲ್ಲಿ ಹೆಚ್ಚಿನ ಪೌಷ್ಟಿಕಾಂಶದ ಆಹಾರವನ್ನು ಸೇವಿಸುವುದು ಉತ್ತಮ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ವಿಟಮಿನ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಕೆಲವು ಅಧ್ಯಯನಗಳು ತೋರಿಸುತ್ತವೆ. ಹಾಗಾದರೆ, ಚಳಿಗಾಲದಲ್ಲಿ ತಿನ್ನಲು ಯಾವುದು ಸೂಕ್ತ ಎಂಬುದನ್ನು ನಾವೀಗ ತಿಳಿಯೋಣ.

* ಬೀಟ್​ರೂಟ್​ ಚಳಿಗಾಲದಲ್ಲಿ ತಿನ್ನಲು ಉತ್ತಮವಾದ ತರಕಾರಿಯಾಗಿದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಯಕೃತ್ತಿನ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ.

* ಸೇಬಿನಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ. ಇದು ಹೃದ್ರೋಗದ ಅಪಾಯವನ್ನೂ ಕಡಿಮೆ ಮಾಡುತ್ತದೆ.

* ಕುಂಬಳಕಾಯಿಯಲ್ಲಿ ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕುಂಬಳಕಾಯಿ ತಿನ್ನುವುದು ಕಣ್ಣಿನ ಆರೋಗ್ಯ ಮತ್ತು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಒಳ್ಳೆಯದು.

* ಸಿಹಿಗೆಣಸಿನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಸಿಹಿ ಗೆಣಸು ರೋಗನಿರೋಧಕ ಶಕ್ತಿ ಮತ್ತು ಚರ್ಮದ ಆರೋಗ್ಯವನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿಯಾಗಿದೆ.

* ಪೇರಳೆ, ಚಳಿಗಾಲದಲ್ಲಿ ತಿನ್ನಲು ಸೂಕ್ತವಾದ ಹಣ್ಣು. ಫೈಬರ್​ನಲ್ಲಿ ಸಮೃದ್ಧವಾಗಿರುವ ಪೇರಳೆ, ರೋಗನಿರೋಧಕ ಕಾರ್ಯವನ್ನು ಬೆಂಬಲಿಸುತ್ತದೆ. ಪೇರಳೆಯು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.

* ಚಳಿಗಾಲದಲ್ಲಿ ಸೊಪ್ಪನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸೊಪ್ಪುಗಳಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಸಮೃದ್ಧವಾಗಿದೆ. ಇದು ಚಳಿಗಾಲದಲ್ಲಿ ಉಲ್ಲಾಸದಿಂದ ಇರಲು ಸಹಾಯ ಮಾಡುತ್ತದೆ.

ಹಕ್ಕು ನಿರಾಕರಣೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net