50 ವರ್ಷದ ನಂತರ ಯೌವನವನ್ನು ಉಳಿಸಿಕೊಳ್ಳಲು ಈ ರೀತಿಯ ಆಹಾರಗಳನ್ನು ಸೇವಿಸಿರಿ! Energy boosting foods

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Energy boosting foods: 50 ವರ್ಷ ವಯಸ್ಸಿನ ನಂತರ, ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸಲು ಪ್ರಾರಂಭವಾಗುತ್ತದೆ. ಮೂಳೆಗಳು ಕ್ರಮೇಣವಾಗಿ ದುರ್ಬಲಗೊಳ್ಳುತ್ತವೆ. ಈ ಸಮಯದಲ್ಲಿ ಮಹಿಳೆಯರ ಸ್ನಾಯುಗಳು ಬಲವನ್ನು ಕಳೆದುಕೊಳ್ಳುವುದು, ಆಯಾಸ ಕಡಿಮೆಯಾಗುವುದು , ಕೆಲವೊಮ್ಮೆ ದೇಹದಲ್ಲಿ ಭಾರವಾಗುವುದು ಹೆಚ್ಚಾಗಲು ಪ್ರಾರಂಭವಾಗುತ್ತದೆ.ಹೀಗಾಗಿ ಮಹಿಳೆಯರು ಈ ಸಮಯದಲ್ಲಿ ಕಡಿಮೆ ಆಹಾರ ಸೇವಿಸುವುದನ್ನು ಮಾಡುತ್ತಾರೆ. 
ಆದರೆ, ಈ ವಯಸ್ಸಿನಲ್ಲಿ ಮಹಿಳೆಯರಿಗೆ ತಮ್ಮ ದೇಹದ ಮೇಲೆ ಕಾಳಜಿ ಮತ್ತು ಸರಿಯಾದ ಪೋಷಣೆಯ ಅಗತ್ಯ ಹೆಚ್ಚಾಗಿರುತ್ತದೆ. ಆದರಿಂದ ಈ ರೀತಿಯ ಆಹಾರಗಳನ್ನು ಸೇವಿಸುವುದರಿಂದ ಹೆಚ್ಚಿನ ಪೋಷಣೆಯನ್ನು ಪಡೆಯಬಹುದು. ಹಾಗಿದ್ದರೆ, ಆ ಆಹಾರಗಳು ಯಾವುದು ಎಂದು ನೋಡೋಣ ಬನ್ನಿ...

ಸಾಲ್ಮನ್ ಮೀನು

ಸಾಲ್ಮನ್ ಮೀನು ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿದೆ. ಹಾಗಾಗಿ 50 ವರ್ಷ ಮೇಲ್ಪಟ್ಟ ಜನರು ಈ ಮೀನನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಇದು ಹೃದಯದ ಆರೋಗ್ಯ, ಕೀಲು ನೋವು ನಿರ್ವಹಣೆ ಮತ್ತು ಮೆದುಳಿನ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಮಸೂರ ಮತ್ತು ಬೀನ್ಸ್

ಮಸೂರ ಮತ್ತು ಬೀನ್ಸ್​ನಲ್ಲಿ ಫೈಬರ್ ಮತ್ತು ಸಸ್ಯ ಪ್ರೋಟೀನ್‌ನಲ್ಲಿ ಸಮೃದ್ಧವಾಗಿವೆ. ಇವುಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸುವುದರಿಂದ ಅವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ.  ಜೊತೆಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಿ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತವೆ.

ಬೆರ್ರಿ ಹಣ್ಣುಗಳು

ಬೆರಿಹಣ್ಣುಗಳು, ಸ್ಟ್ರಾಬೆರಿಗಳು ಮತ್ತು ರಾಸ್ಪ್ಬೆರಿಗಳಂತಹ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿರುತ್ತದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು, ಸ್ಮರಣೆಯನ್ನು ಸುಧಾರಿಸಲು ಮತ್ತು ದೇಹವನ್ನು ಒಳಗಿನಿಂದ ಯೌವನಯುತವಾಗಿಡಲು ಸಹಾಯ ಮಾಡುತ್ತದೆ.

ಹಸಿರು ಎಲೆಗಳ ತರಕಾರಿಗಳು

ಪಾಲಕ್, ಮೆಂತ್ಯ ಮತ್ತು ಸಾಸಿವೆ ಸೊಪ್ಪುಗಳಂತಹ ಹಸಿರು ತರಕಾರಿಗಳಲ್ಲಿ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಫೈಬರ್‌ ಸಮೃದ್ಧವಾಗಿದೆ. ಇವು ಮೂಳೆಗಳನ್ನು ಬಲಪಡಿಸುವುದರ ಜೊತೆಗೆ ರಕ್ತಹೀನತೆಯ ವಿರುದ್ಧ ಹೋರಾಡಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಬೀಜಗಳು/ ಧಾನ್ಯಗಳು

ಬಾದಾಮಿ, ವಾಲ್ನಟ್ಸ್, ಅಗಸೆ ಬೀಜಗಳು ಮತ್ತು ಚಿಯಾ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯಕರ ಕೊಬ್ಬುಗಳು ಪ್ರೋಟೀನ್ ಮತ್ತು ಫೈಬರ್​ನಿಂದ ತುಂಬಿರುತ್ತದೆ. ಪ್ರತಿದಿನ ಇವುಗಳನ್ನು ಸ್ವಲ್ಪ ಪ್ರಮಾಣದಲ್ಲಿ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಹಾಗೆಯೇ ದಿನವಿಡೀ ಚೈತನ್ಯವನ್ನು ಇರಿಸಬಹುದು.

ಮೊಟ್ಟೆಗಳು

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೊಟೀನ್​ ಮತ್ತು ವಿಟಮಿನ್​ ಡಿಯನ್ನು ಉತ್ತಮ ಹೊಂದಿದೆ. ಇದರ ನಿಯಮಿತ ಸೇವನೆಯು ಉತ್ತಮ ಗುಣ ಮಟ್ಟದ ಪ್ರೊಟೀನ್​ಗಳನ್ನು ದೇಹಕ್ಕೆ ಒದಗಿಸಲು ಸಹಾಯ ಮಾಡುತ್ತದೆ. ಹಾಗೆಯೇ ಆಯಾಸವನ್ನು ಕಡಿಮೆ ಮಾಡಿ ದೇಹಕ್ಕೆ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ (ಏಜೆನ್ಸೀಸ್​).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net