More

    ಬಾಲಕಿಯ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

    ಉಡುಪಿ: ಕಾರ್ಕಳದ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷಗಳ ಹಿಂದೆ 13 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿ ಆಗಿಸಿದ ಅಪರಾಧಿಗೆ ಜಿಲ್ಲಾ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
    ಅಪರಾಧಿ ಶಂಕರ್ (30)ಗೆ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ, ಕೊಲೆ ಬೆದರಿಕೆ ಹಾಕಿದ್ದಕ್ಕೆ 3 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ರೂ. ಪರಿಹಾರ ಮತ್ತು ದಂಡದ ಮೊತ್ತದಲ್ಲಿ ಸಂತ್ರಸ್ತೆಗೆ 15 ಸಾವಿರ ಹಾಗೂ 5 ಸಾವಿರ ಸರ್ಕಾರಕ್ಕೆ ನೀಡಲು ನ್ಯಾಯಾಧೀಶೆ ಎರ್ಮಾಳು ಕಲ್ಪನಾ ಆದೇಶಿಸಿದ್ದಾರೆ.

    ಮಗುವಿನ ಡಿಎನ್‌ಎ ಮ್ಯಾಚ್: 2018ರಲ್ಲಿ ಬಾಲಕಿ ಮನೆಗೆ ಬಂದಿದ್ದ ಶಂಕರ್ ಅತ್ಯಾಚಾರ ಎಸಗಿದ್ದರಿಂದ ಆಕೆ ಗರ್ಭವತಿಯಾಗಿದ್ದಳು. ವಿಚಾರ ತಿಳಿದ ಪಾಲಕರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಅಂದಿನ ಕಾರ್ಕಳ ವೃತ್ತನಿರೀಕ್ಷಕ ಜಾಯ್ ಅಂತೋನಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ 11 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಮಗುವಿನ ಡಿಎನ್‌ಎ ವರದಿಯಲ್ಲಿ ಸಾಮ್ಯತೆ ಹಾಗೂ ಸಂತ್ರಸ್ತ ಬಾಲಕಿ ಸಹಿತ ವಿವಿಧ ಸಾಕ್ಷೃಗಳು ಆರೋಪವನ್ನು ಸಾಬೀತುಪಡಿಸಿವೆ. ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts