17 C
Bangalore
Monday, December 9, 2019

ಮುಗಿಯದ ಲೈಟ್ ಫಿಶಿಂಗ್ ಗೋಳು

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

<<ಹೈಕೋರ್ಟ್, ಸರ್ಕಾರದ ಆದೇಶ ಉಲ್ಲಂಘಿಸಿ ಮೀನುಗಾರಿಕೆ ನಿಯಮ ಪಾಲನೆ ವ್ಯವಸ್ಥೆ ದುರ್ಬಲ>>

– ಪ್ರಕಾಶ್ ಮಂಜೇಶ್ವರ ಮಂಗಳೂರು
ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿರ್ಬಂಧಿಸಿದ ಸರ್ಕಾರ ಮತ್ತು ಹೈಕೋರ್ಟ್ ಆದೇಶ ಉಲ್ಲಂಘಿಸಿ ಮಂಗಳೂರು ಭಾಗ ದಲ್ಲಿ ಮೀನುಗಾರಿಕೆ ಮುಂದುವರಿದಿದೆ. ಅಪರಾಧ ಸಾಬೀತುಪಡಿಸುವುದು ಸಂಬಂಧಪಟ್ಟ ಇಲಾಖೆಗೆ ಸವಾಲಾಗಿಯೇ ಇದೆ.
ಕರಾವಳಿ ತಟ ರಕ್ಷಣಾ ಪಡೆ ಹಾಗೂ ಕರಾವಳಿ ಕಾವಲು ಪೊಲೀಸ್‌ನಿಂದ ಈ ವಿಷಯದಲ್ಲಿ ಹೆಚ್ಚಿನ ಸಹಕಾರ ದೊರೆಯುತ್ತಿಲ್ಲ ಎನ್ನುವ ಆಕ್ಷೇಪಗಳು ಮೀನುಗಾರರ ಕಡೆಯಿಂದ ಇದೆ. ಟ್ರಾಲ್‌ಬೋಟ್ ಮೀನುಗಾರರ ಸಂಘದಿಂದ ಸೋಮವಾರ ಕೂಡ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಮಲ್ಪೆ ಮಾದರಿ: ವೈಜ್ಞಾನಿಕ ಮೀನುಗಾರಿಕೆ ತಕ್ಷಣ ನಿಲ್ಲಿಸುವಂತೆ ಡೀಪ್ ಸೀ ಟ್ರಾಲ್‌ಬೋಟ್ ಅಸೋಸಿಯೇಶನ್ ವಾರದ ಹಿಂದೆ ಒತ್ತಡ ಹೇರಿದ ಪರಿಣಾಮ ಜಿಲ್ಲಾಡಳಿತ ಚುರುಕುಗೊಂಡಿತ್ತು. ಮೀನುಗಾರಿಕೆ ಸಂಬಂಧಿಸಿದ 21 ಸಂಘಟನೆಗಳು ಒಳಗೊಂಡಿರುವ ಮಲ್ಪೆ ಮೀನುಗಾರರ ಸಂಘಟನೆ ಲೈಟ್ ಫಿಶಿಂಗ್ ನಿಲ್ಲಿಸುವ ಬಗ್ಗೆ ತೆಗೆದುಕೊಂಡ ನಿರ್ಣಯಕ್ಕೆ ಹೆಚ್ಚಿನ ಬೆಂಬಲ ದೊರೆತಿದೆ. ಸದ್ಯ ಅಲ್ಲಿ ಲೈಟ್ ಫಿಶಿಂಗ್ ಸ್ಥಗಿತಗೊಂಡಿದೆ. ಮಂಗಳೂರು ಪರ್ಸೀನ್ ಮತ್ತು ಟ್ರಾಲ್ ಬೋಟು ಮೀನುಗಾರರ ಸಂಘಟನೆಗಳ ಪೂರ್ಣ ಬೆಂಬಲ ಬಳಿಕವೂ ಇಂತಹ ಪ್ರಯೋಗ ಮಂಗಳೂರಿನಲ್ಲಿ ಇಲ್ಲಿವರೆಗೆ ಯಶಸ್ವಿಯಾಗಿಲ್ಲ. ಮೀನುಗಾರಿಕೆಯನ್ನು ಕೇವಲ ಉದ್ಯಮ ದೃಷ್ಟಿಯಿಂದ ನೋಡುವ ಕೋಟ್ಯಧಿಪತಿಗಳು ಮೀನುಗಾರಿಕೆ ಕ್ಷೇತ್ರಕ್ಕೆ ಪ್ರವೇಶವಾಗಿರುವುದೇ ಇಂತಹ ಅನಾಹುತಗಳಿಗೆ ಕಾರಣ ಎನ್ನುವ ಅಸಮಾಧಾನ ಸ್ಥಳೀಯರಲ್ಲಿದೆ.

ಸಂಘರ್ಷದ ಆತಂಕ:  ಬುಲ್‌ಟ್ರಾಲ್ ಮತ್ತು ಲೈಟ್ ಫಿಶಿಂಗ್ ಕಾನೂನುಬಾಹಿರ. ನಿಯಮ ಉಲ್ಲಂಘನೆ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಸಂಘರ್ಷದ ವಾತಾವರಣ ಸೃಷ್ಟಿ ಸಾಧ್ಯತೆ ಬಗ್ಗೆ ಟ್ರಾಲ್ ಬೋಟ್ ಮೀನುಗಾರರ ಸಂಘದ ಮುಖಂಡ ನಿತಿನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

ಯಾಕೆ ಈ ನಿಷೇಧ?:  ಎಲ್‌ಇಡಿ, ಹ್ಯಾಲೋಜಿನ್ ದೀಪದ ಬೆಳಕು ಬಳಸಿ ಸಮುದ್ರದಾಳದಲ್ಲಿ ಯಾಂತ್ರೀಕೃತ ಬೋಟ್ ಮೂಲಕ ಮೀನುಗಾರಿಕೆ ನಡೆಸುವುದನ್ನು ಲೈಟ್ ಫಿಶಿಂಗ್ ಎನ್ನುತ್ತಾರೆ. ಈ ರೀತಿಯ ಮೀನುಗಾರಿಕೆಯಿಂದ ಮತ್ಸೃಸಂತತಿ ವೇಗವಾಗಿ ನಾಶವಾಗುತ್ತದೆ. ಮೀನು ಉತ್ಪತ್ತಿ ಪ್ರಮಾಣ ಕುಸಿಯುತ್ತದೆ. ಸಾಂಪ್ರದಾಯಿಕ ಮೀನುಗಾರರು ಸಮಸ್ಯೆಯಲ್ಲಿ ಸಿಲುಕುತ್ತಾರೆ ಎನ್ನುವ ಕಾರಣದಿಂದ ಕೇಂದ್ರ ಪಶು ಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವಾಲಯ 2017ರಲ್ಲಿ ಲೈಟ್ ಫಿಶಿಂಗ್ ನಿಷೇಧಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಈ ವಿಷಯದಲ್ಲಿ ಸರ್ಕಾರದ ಆದೇಶವೇ ಅಂತಿಮ. ಯಾರಿಗಾದರೂ ಸಮಸ್ಯೆ ಇದ್ದರೆ ಭಾರತ ಸರ್ಕಾರಕ್ಕೆ ಅಪೀಲು ಮಾಡಬಹುದು ಎಂದು ತೀರ್ಪು ನೀಡಿತ್ತು.

ಸರ್ಕಾರ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘಿಸಿ ಮಂಗಳೂರಿನಲ್ಲಿ ಲೈಟ್ ಫಿಶಿಂಗ್ ನಡೆಯುತ್ತಿರುವ ಬಗ್ಗೆ ಮೀನುಗಾರಿಕೆ ಇಲಾಖೆಗೆ ದೂರು ನೀಡಲಾಗಿದೆ. ನಿಯಮ ಅನುಷ್ಠಾನ ವ್ಯವಸ್ಥೆ ಬಲಗೊಳ್ಳಬೇಕು. ಲೈಟ್ ಫಿಶಿಂಗ್ ನಡೆಸುವ ಬೋಟ್‌ಗಳನ್ನು ಸಮುದ್ರದಲ್ಲಿ ಗುರುತಿಸುವುದು ಸುಲಭ. ಆದರೆ ಅದನ್ನು ಆಧಾರ ಸಹಿತ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವುದು ಆವಶ್ಯ.
– ನಿತಿನ್ ಕುಮಾರ್, ಮೀನುಗಾರಿಕೆ ಮುಖಂಡರು.

ಎರಡು ದಿನ ಹಿಂದೆ ಮಂಗಳೂರಲ್ಲಿ ಲೈಟ್ ಫಿಶಿಂಗ್ ನಡೆಸಿರುವ ಬಗ್ಗೆ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಬೋಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಕಳೆದ ಮಾರ್ಚ್‌ನಲ್ಲಿ ಈ ವಿಷಯದಲ್ಲಿ ನಿಯಮ ಉಲ್ಲಂಘಿಸಿದ ಎರಡು ಬೋಟ್‌ಗಳಿಗೆ ಒಟ್ಟು 45 ಸಾವಿರ ರೂ. ದಂಡ ವಿಧಿಸಲಾಗಿತ್ತು.
– ತಿಪ್ಪೇಸ್ವಾಮಿ, ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ (ದ.ಕ)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...