20.1 C
Bangalore
Friday, December 6, 2019

ಗುಡುಗು-ಸಿಡಿಲಿಗೆ 73 ಮಂದಿ ಸಾವು: ಬಿಹಾರ, ಜಾರ್ಖಂಡ್​, ಉತ್ತರ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ

Latest News

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಕೋಟೆ ನಾಡಲ್ಲಿಂದು ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ದೇಶದ ಏಕತೆ ಸಲುವಾಗಿ ಶಿರಸಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ...

14ರಂದು ಲೋಕ್ ಅದಾಲತ್

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನ.14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...

ಆಯುಷ್ ಉಚಿತ ಚಿಕಿತ್ಸಾ ಶಿಬಿರ

ಪರಶುರಾಮಪುರ: ಹೋಬಳಿಯ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಇತ್ತೀಚಿಗೆ ಆಯುಷ್ ಉಚಿತ ಚಿಕಿತ್ಸಾ ಶಿಬಿರ ನಡೆಯಿತು. ಗ್ರಾಪಂ ವ್ಯಾಪ್ತಿಯ ಪಿ.ಓಬನಹಳ್ಳಿ, ಕಡೇಹುಡೆ,...

ಡ್ರೋನ್ ಕಣ್ಣಿಗೂ ಬೀಳದ ಒಂಟಿ ಸಲಗ

ಚಿತ್ರದುರ್ಗ: ಕೆನ್ನೆಡಲು ಅರಣ್ಯದಲ್ಲಿ ಸಲಗದ ಹೆಜ್ಜೆ ಗುರುತು ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಶುಕ್ರವಾರ ಡ್ರೋನ್ ಬಳಸಿದರೂ ಆನೆ ಪ್ರಯೋಜನವಾಗಿಲ್ಲ. ಹಿಂಡಿಂದ ಅಗಲಿದೇ ಎಂದು ಹೇಳಲಾಗಿರುವ...

ಪಟನಾ: ಬಿಹಾರ, ಜಾರ್ಖಂಡ್​ ಮತ್ತು ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಗುಡುಗು ಮಿಂಚಿಗೆ ಸುಮಾರು 73 ಮಂದಿ ಸಾವಿಗೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಬಿಹಾರವೊಂದರಲ್ಲಿ 39 ಮಂದಿ ಅಸುನೀಗಿದ್ದು, ಜಾರ್ಖಂಡ್​ 28 ಹಾಗೂ ಉತ್ತರ ಪ್ರದೇಶದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ಜಾರ್ಖಂಡ್​ನ ಜಮ್ತಾರ ಮತ್ತು ಲತೆಹಾರ್​ನಲ್ಲಿ ತಲಾ ಆರು ಮಂದಿ, ಛತ್ರಾದಲ್ಲಿ ನಾಲ್ಕು, ಗರ್ವಾ ಮತ್ತು ದುಮ್ಕದಲ್ಲಿ ತಲಾ ಮೂರು, ಗಿರಿದಿಹ್​ ಮತ್ತು ಪಕುರ್​ನಲ್ಲಿ ತಲಾ ಎರಡು, ಧನಬಾದ್​ ಮತ್ತು ದಿಯೊಘರ್​ನಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಹಾಗೇ ಧನಬಾದ್​ ಮತ್ತು ಲತೇಹಾರ್​ನಲ್ಲಿ ತಲಾ 3 ಮೂರು ಮಂದಿ ಮತ್ತು ಛತ್ರಾದಲ್ಲಿ ಇಬ್ಬರು ಗುಡುಗು-ಸಿಡಿಲಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವಿನ ಸಂಖ್ಯೆ ಇನ್ನು ಏರುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಜಾರ್ಖಂಡ್​ ಮತ್ತು ಉತ್ತರ ಪ್ರದೇಶದ ಸರ್ಕಾರಗಳು ಸಂತ್ರಸ್ತ ಕುಟುಂಬಗಳಿಗೆ ತಲಾ 4 ಲಕ್ಷ ಪರಿಹಾರ ಹಣವನ್ನು ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯ ಪ್ರಕಾರ ಜೂನ್​ನಿಂದ ಸೆಪ್ಟೆಂಬರ್​ವರೆಗಿನ ಮಾನ್ಸೂನ್​ ಸೀಸನ್​ನಲ್ಲಿ ಗುಡುಗು ಸಿಡಿಲು ಸಂಭವಿಸಲಿದೆ.​

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಸಾವಿನ ಸಂಖ್ಯೆ 123ಕ್ಕೆ ಏರಿದೆ. 12 ಜಿಲ್ಲೆಗಳಲ್ಲಿನ 105 ಪ್ರದೇಶಗಳ ಸುಮಾರು 81 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹಕ್ಕೆ ತುತ್ತಾಗಿದ್ದಾರೆ. ಅಲ್ಲಲ್ಲಿ 54 ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದ್ದು, 29,400 ಮಂದಿ ಪ್ರವಾಹ ಸಂತ್ರಸ್ತರು ತಂಗಿದ್ದಾರೆ. ಅವರಿಗಾಗಿ 812 ಸಮುದಾಯ ಅಡುಗೆ ಮನೆಗಳನ್ನು ಅಳವಡಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ(ಎನ್​ಡಿಆರ್​​ಎಫ್​) ಹಾಗೂ ರಾಜ್ಯ ವಿಪತ್ತು ನಿರ್ವಹಣೆ(ಎಸ್​ಡಿಆರ್​ಎಫ್​)ಯ 29 ತಂಡ ರಕ್ಷಣೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೋಟಿಸ್​ ನೀಡಿದ್ದು, ಉತ್ತರ ಪ್ರದೇಶ, ಜಾರ್ಖಂಡ್​ ಮತ್ತು ಬಿಹಾರಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗಲಿದೆ ಎಂದು ಹೇಳಿದೆ.

ಇಲ್ಲಿಯವರೆಗೆ ಪ್ರಹಾಹದಿಂದ 1.25 ಲಕ್ಷ ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಜುಲೈ 16ರಂದು ಬಿಹಾರ್​ ಮುಖ್ಯಮಂತ್ರಿ ನಿತೀಶ್​ ಕುಮಾರ್​ ತಿಳಿಸಿದ್ದರು. ಶೀಯೋಹಾರ್​​​, ಧರ್ಬಾಂಘ, ಸೀತಾಮಾರ್ಹಿ, ಉತ್ತರ ಚಂಪಾರಣ್​, ಮಧುಬನಿ, ಅರರಿಯಾ ಮತ್ತು ಕಿಶನ್​ಗಂಜ್​ ಸೇರಿದಂತೆ 12 ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಹೆಚ್ಚಾಗಿ ಗಂಭೀರ ಪರಿಣಾಮ ಬೀರಿತ್ತು. ಪ್ರವಾಹ ಸಂತ್ರಸ್ತರ ಕುಟುಂಬಗಳ ಬ್ಯಾಂಕ್​ ಖಾತೆಗೆ 6 ಸಾವಿರ ರೂ ಹಣವನ್ನು ನೇರವಾಗಿ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಸಿಎಂ ನಿತೀಶ್​ ಕುಮಾರ್​ ಜುಲೈ 19ರಂದು ಚಾಲನೆ ನೀಡಿದ್ದಾರೆ. (ಏಜೆನ್ಸೀಸ್​)

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...