More

    ಶಾಲಾ ಕಾಲೇಜುಗಳಿಗೆ ಸುಣ್ಣ ಬಣ್ಣ

    ಸಾಗರ: ಕಳೆದ 15 ವರ್ಷಗಳಲ್ಲಿ ಸಾಗರ ಮತ್ತು ಹೊಸನಗರ ತಾಲೂಕಿನ ಯಾವುದೇ ಶಾಲಾ ಕಾಲೇಜುಗಳಿಗೆ ಸುಣ್ಣ-ಬಣ್ಣ ಮಾಡಿಲ್ಲ. ಇದರಿಂದ ಶಾಲಾ ಕಾಲೇಜುಗಳು ಹೊಳಪು ಕಳೆದುಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
    ನಗರದ ನೆಹರು ಮೈದಾನದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಯೋಜನೆಯಡಿ 50.10 ಲಕ್ಷ ರೂ. ವೆಚ್ಚದಲ್ಲಿ ಎರಡು ನೂತನ ಕೊಠಡಿಗಳಿಗೆ ಸೋಮವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಈ ಸಾಲಿನಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ಸುಣ್ಣ-ಬಣ್ಣ ಮಾಡಿಸುವ ಸಂಕಲ್ಪ ಕೈಗೊಳ್ಳಲಾಗಿದ್ದು, ಹಂತ ಹಂತವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಮಕ್ಕಳು ಶೈಕ್ಷಣಿಕ ಸೌಲಭ್ಯ ಪಡೆದು ಗುಣಮಟ್ಟದ ಫಲಿತಾಂಶ ತರುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
    ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು ಅದಕ್ಕೆ ಬೇಕಾದ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಉತ್ತಮ ಸೌಲಭ್ಯ ನೀಡಿದರೆ ಪಾಲಕರು ಖಾಸಗಿ ಶಾಲೆಗಳತ್ತ ಮಕ್ಕಳನ್ನು ಕಳುಹಿಸುವುದಿಲ್ಲ. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಶಾಲಾ ವಾತಾವರಣ, ಕೊಠಡಿ, ಗ್ರಂಥಾಲಯ, ಪ್ರಯೋಗಾಲಯದಂತಹ ಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ. ಅದನ್ನು ಗಮನಿಸಿ ಸರ್ಕಾರ ಸರ್ಕಾರಿ ಶಾಲಾ ಕಾಲೇಜುಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. ಖಾಸಗಿ ಶಾಲೆಯಲ್ಲಿ ಹಣ ಕೊಟ್ಟು ಶಿಕ್ಷಣ ಪಡೆಯಬೇಕು. ಆದರೂ ಸೌಲಭ್ಯಗಳು ಇರುವುದಿಲ್ಲ. ಸರ್ಕಾರಿ ಶಾಲೆಯಲ್ಲಿ ಉಚಿತ ಶಿಕ್ಷಣದ ಜತೆಗೆ ಮೂಲ ಸೌಲಭ್ಯ ಕಲ್ಪಿಸಿದರೆ ಮಕ್ಕಳು ಆಕರ್ಷಿತರಾಗುತ್ತಾರೆ ಎಂದು ಹೇಳಿದರು.
    ಪ್ರಾಚಾರ್ಯ ಅರುಣಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುಮಂಗಲಾ ರಾಮಕೃಷ್ಣ, ಪ್ರಮುಖರಾದ ತ್ಯಾಗಮೂರ್ತಿ, ಅಬ್ದುಲ್ ರೆಹಮಾನ್, ಶ್ರೀಹರ್ಷ, ಭವ್ಯಾ ಕೃಷ್ಣಮೂರ್ತಿ, ವಿಲ್ಸನ್, ಬಿ.ಎನ್.ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts