More

    ಸಂಚಾರಿ ವಿಜಯ್​ಗೆ ಅವಮಾನ: ಫಿಲಂ ಚೇಂಬರ್​ ನಡೆಗೆ ಲಿಂಗದೇವರು ಅಸಮಾಧಾನ …

    ಬೆಂಗಳೂರು: ಕಳೆದ ಕೆಲವು ದಿನಗಳಲ್ಲಿ ಕನ್ನಡ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಱರು ನಿಧನರಾದ ಹಿನ್ನೆಲೆಯಲ್ಲಿ, ಅಗಲದಿವರ ನೆನಪಲ್ಲಿ ಗುರುವಾರವಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಶ್ರದ್ಧಾಂಜಲಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ನಟ ಸಂಚಾರಿ ವಿಜಯ್​ ಅವರಿಗೆ ಅಗೌರವ ತೋರಲಾಗಿದೆ ಎಂದು ನಿರ್ದೇಶಕ ಬಿ.ಎಸ್​. ಲಿಂಗದೇವರು ಬೇಸರ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ನಾಳೆ ನೆಟ್​​ಫ್ಲಿಕ್ಸ್​ನಲ್ಲಿ ಧನುಷ್​ ನಟನೆಯ ಜಗಮೇ ತಂಧಿರಮ್; 17 ಭಾಷೆಗಳಲ್ಲಿ ಚಿತ್ರ ನೋಡಬಹುದು!

    ಈ ಕುರಿತು ಸೋಷಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಅವರು, ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಗಲಿದ ಎಲ್ಲ ಚಿತ್ರರಂಗದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆಯೊಂದನ್ನು ಇಂದು ಕರೆದಿತ್ತು. ಪುಷ್ಪನಮನ ಸಲ್ಲಿಸುವ ಸಲುವಾಗಿ ವೇದಿಕೆಯಲ್ಲಿ ಕೆ.ಸಿ.ಎನ್.ಚಂದ್ರಶೇಖರ್, ರಾಮು ಮತ್ತು ‘ಅಣ್ಣಯ್ಯ’ ನಿರ್ಮಾಪಕ ಚಂದ್ರಶೇಖರ್ ಅವರ ಭಾವಚಿತ್ರಗಳನ್ನು ಇಡಲಾಗಿತ್ತು. ಅಗಲಿದ ಉಳಿದ ನಿರ್ಮಾಪಕರು, ನಿದೇಶಕರು, ತಂತ್ರಜ್ಞರು, ಕಲಾವಿದರು, ಕಾರ್ಮಿಕರು ಮುಂತಾದವರ ಭಾವಚಿತ್ರಗಳನ್ನು ಒಂದರ ಹಿಂದೊಂದು ಬರುವಂತೆ ಟಿವಿಯಲ್ಲಿ ಅಳವಡಿಸಲಾಗಿತ್ತು. ಗತಿಸಿದ ಎಲ್ಲರ ಭಾವಚಿತ್ರಗಳನ್ನು ವೇದಿಕೆಯ ಮೇಲೆ ಜೋಡಿಸಿ ಇಡುವುದು ಅಸಾಧ್ಯ ಕೂಡ. ಆದರೆ, ಇಂತಹ ಸಂದರ್ಭಗಳಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತದೆ ಎನ್ನುವ ಪ್ರಾಥಮಿಕ ತಿಳುವಳಿಕೆಯೂ ಸಂಬಂಧಪಟ್ಟವರಿಗೆ ಇಲ್ಲದೆ ಹೋದರೆ ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ.

    ‘ಗತಿಸಿದವರಲ್ಲಿ ತಮ್ಮ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಪಡೆದು ನಾಡಿಗೆ ಹೆಮ್ಮೆ ತಂದ ಸಂಚಾರಿ ವಿಜಯ್ ಅವರು ಅನೇಕ ಸಮಾಜಮುಖಿ ಕೆಲಸ ಮಾಡಿ ಕನ್ನಡಿಗರ ಮನ, ಮನೆ ಮಾತಾಗಿದ್ದಾರೆ. ವಿಜಯ್ ಮಿದುಳು ನಿಷ್ಕ್ರಿಯವಾದ ನಂತರ, ಆರು ಮಂದಿಗೆ ಹೊಸ ಬದುಕು ನೀಡುವ ಉದ್ದೇಶದಿಂದ, ಅವರ ಅಂಗಾಂಗ ದಾನ ಮಾಡುವ ಉದಾತ್ತ ನಿರ್ಧಾರ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ವಿಜಯ್ ಕುಟುಂಬದವರು. ಈ ಎಲ್ಲಾ ಹಿನ್ನೆಲೆಯಲ್ಲಿಯೇ ವಿಜಯ್ ಅಂತಿಮ ಸಂಸ್ಕಾರದ ವೇಳೆ ಸರ್ಕಾರದ ಗೌರವ ಸಂದಿತ್ತು. ಅದು ನಾಡಿಗೆ ಗೌರವ ತಂದು ಕೊಟ್ಟವರಿಗೆ ವಿದಾಯದ ವೇಳೆ ಸಂದ ಗೌರವ. ಕನ್ನಡ ಚಿತ್ರರಂಗದ ಪ್ರಾತಿನಿಧಿಕ ಸಂಸ್ಥೆ ಎಂದು ತನ್ನನ್ನು ಕರೆದುಕೊಳ್ಳುವ, ಪ್ರತಿ ಸಂದರ್ಭದಲ್ಲೂ ವರನಟ ಡಾ. ರಾಜಕುಮಾರ್ ಅವರನ್ನು ಸ್ಮರಿಸುವ ವಾಣಿಜ್ಯ ಮಂಡಳಿ, ಪ್ರಶಸ್ತಿ ವಿಜೇತ, ಸಮಾಜ ಮುಖಿ ಕಲಾವಿದನಿಗೆ ಶ್ರದ್ಧಾಂಜಲಿ ವೇಳೆ ಸೂಕ್ತ ಗೌರವ ನೀಡದೇ ಇರುವುದು ನಿಜಕ್ಕೂ ಖಂಡನಾರ್ಹ ಮತ್ತು ವಿಜಯ್ ಕುಟುಂಬಕ್ಕೆ ತೋರಿದ ಅಗೌರವ’ ಎಂದು ಲಿಂಗದೇವರು ಅಭಿಪ್ರಾಯಪಟ್ಟಿದ್ದಾರೆ.

    ಇದನ್ನೂ ಓದಿ: ನಿನಗೆ ಗಿಣಿ ಅಂದ್ರೆ ಇಷ್ಟ, ಅದಕ್ಕೆ ಅದನ್ನೇ ದತ್ತು ಪಡೆದಿದ್ದೇನೆ; ‘ಸಂಚಾರಿ’ ನೆನಪಲ್ಲಿ ಚಕ್ರವರ್ತಿ ಚಂದ್ರಚೂಡ

    ‘ಒಂದು ವೇಳೆ, ವಾಣಿಜ್ಯ ಮಂಡಳಿಯು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರು ಮಾತ್ರ ಸದಸ್ಯರಾಗಿರುವ ಸಂಸ್ಥೆ ಎಂದು ಹೇಳುವುದಿದ್ದರೆ, ಉಳಿದವರ ಭಾವಚಿತ್ರಗಳನ್ನು ಅಲ್ಲಿ ಹಾಕಬೇಕಾದ ಅಗತ್ಯ ಇರಲಿಲ್ಲ’ ಎಂದು ಲಿಂಗದೇವರು ಹೇಳಿದ್ದಾರೆ.

    ಅಗಲಿದ ಚಿತ್ರರಂಗದ ಗಣ್ಯರನ್ನು ನೆನೆದ ಕರ್ನಾಟಕ ಫಿಲಂ ಚೇಂಬರ್ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts