20.4 C
Bengaluru
Monday, January 20, 2020

ಲಿಂಗದಹಳ್ಳಿ ಸ್ವಾಮೀಜಿ ಸೇವೆ ಶ್ಲಾಘನೀಯ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ವಿಜಯವಾಣಿ ಸುದ್ದಿಜಾಲ ರಾಣೆಬೆನ್ನೂರ

ಸಮಾಜದ ಹಿತಕ್ಕಾಗಿ ಕೆಲಸ ಮಾಡುವವರಿಗೆ ಯಾವುದೇ ಸಂಪತ್ತಿನ ಕೊರತೆ ಬರುವುದಿಲ್ಲ. ಆದರೆ, ಸ್ವಾರ್ಥಕ್ಕಾಗಿ ಕೆಲಸ ಮಾಡುವವರಿಗೆ ಎಷ್ಟಿದ್ದರೂ ಸಮಾಧಾನ ಆಗುವುದಿಲ್ಲ ಎಂದು ಕಾಶಿ ಜಗದ್ಗುರು ಶ್ರೀ ಡಾ. ಚಂದ್ರಶೇಖರ ಸ್ವಾಮೀಜಿ ಹೇಳಿದರು.

ತಾಲೂಕಿನ ಲಿಂಗದಹಳ್ಳಿ ಸ್ಪಟಿಕ ಶಿವಲಿಂಗ ಸನ್ನಿಧಿ ಹಾಗೂ ರಂಭಾಪುರಿ ಶಾಖಾ ಮಠದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಾರುದ್ರಯಾಗ, ಶ್ರೀಮದ್ ರೇಣುಕಾಚಾರ್ಯರ ಜಯಂತಿ ಮಹೋತ್ಸವ, ರಥೋತ್ಸವ, ಗುಗ್ಗಳ ಸಮಾರಾಧನೆ, ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಲಿಂಗದಹಳ್ಳಿಯ ರಂಭಾಪುರಿ ಮಠದ ಸ್ವಾಮೀಜಿ ಉಚಿತ ಶಿಕ್ಷಣ ನೀಡುವ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ಆದ್ದರಿಂದ ಮಠಕ್ಕೆ ಧನ-ಧಾನ್ಯದ ಸಂಪತ್ತು ಹರಿದು ಬರುತ್ತಿದೆ. ಸಮಾಜ ಸೇವೆಗೆ ಸಿಗುವ ಬೆಲೆ ಇದರಿಂದ ಗೊತ್ತಾಗುತ್ತದೆ ಎಂದರು.

ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶ್ರೀ ಶಿವಲಿಂಗ ಸ್ವಾಮೀಜಿ ಮಾತನಾಡಿ, ಬಾಲ್ಯದಿಂದಲೇ ಜ್ಞಾನ ಸಂಪಾದನೆ ಮಾಡಿಕೊಳ್ಳಬೇಕು. ಜ್ಞಾನಕ್ಕೆ ನಮ್ಮ ದೇಶದಲ್ಲಿ ಮಹತ್ವದ ಪ್ರಾಧ್ಯಾನ್ಯತೆ ನೀಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಜ್ಞಾನ ಹೊಂದಬೇಕು. ಜ್ಞಾನದ ಮೂಲಕವೇ ಮನುಷ್ಯ ನ ಅಭಿವೃದ್ಧಿ ಹಾಗೂ ಎತ್ತರಕ್ಕೆ ಬೆಳೆಯಲು ಅನುಕೂಲವಾಗಲಿದೆ ಎಂದರು.

ಮಠದ ಶ್ರೀ ವೀರಭದ್ರೇಶ್ವರ ಸ್ವಾಮೀಜಿ, ನರಸಾಪುರ ವೀರೇಶ್ವರ ಶಿವಶರಣರ ಮಹಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಧರ್ಮಸಭೆಗೂ ಮುನ್ನ ಡಾ. ಚಂದ್ರಶೇಖರ ಶಿವಾಚಾರ್ಯ ಸಮುದಾಯ ಭವನ ನಿರ್ವಣಕ್ಕೆ ಹಾಗೂ ಶ್ರೀ ಜಗದ್ಗುರು ವಿಶ್ವೇಶ್ವರ ಶಿವಾಚಾರ್ಯ ಗುರುಕುಲ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಎಕ್ಸ್​ಲೆಂಟ್ ಪಬ್ಲಿಕ್ ಸ್ಕೂಲ್​ನ 5ನೇ ತರಗತಿಯಿಂದ ಉಚಿತ ವಸತಿಯುತ ಶಾಲೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಹಲವರಿಗೆ ಶಿವದೀಕ್ಷೆ ನೀಡಲಾಯಿತು.

ಜಿಪಂ ಮಾಜಿ ಉಪಾಧ್ಯಕ್ಷ ಎಸ್.ಎಸ್. ರಾಮಲಿಂಗಣ್ಣವರ, ನಿಶಾರ್ಡ್ ಸಂಸ್ಥೆ ಅಧ್ಯಕ್ಷೆ ರುಕ್ಮಿಣಿ ಸಾವಕಾರ, ಭಾರತಿ ಅಳವಂಡಿ, ಸುಜಿತ್ ಜಂಬಗಿ, ತಾಪಂ ಮಾಜಿ ಉಪಾಧ್ಯಕ್ಷೆ ಚೈತ್ರಾ ಮಾಗನೂರ, ಮಂಜುನಾಥ ಗೌಡಶಿವಣ್ಣವರ, ನಿತ್ಯಾನಂದ ಕುಂದಾಪುರ ಮತ್ತಿತರರಿದ್ದರು.

ವಿಜಯವಾಣಿ ವರದಿಗಾರ ಪ್ರಶಾಂತ ರಿಪ್ಪನಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿರೂಪಾಕ್ಷ ಶಾಸ್ತ್ರೀ ಹಾಗೂ ಸಂಗಡಿಗರು ವೇದಘೊಷ ಪಠಿಸಿದರು. ಸಿ.ಎಂ. ಪೂಜಾರ ಸ್ವಾಗತಿಸಿದರು. ಗಂಗಾಧರ ಶಾಸ್ತ್ರೀ ನಿರೂಪಿಸಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...