More

    ಲಿಂಗನಮಕ್ಕಿಗೆ ಹೆಚ್ಚಿದ ಒಳಹರಿವು, ಕೆಪಿಸಿಎಲ್ ಮುನ್ನೆಚ್ಚರಿಕೆ

    ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಶೀಘ್ರದಲ್ಲಿ ಗರಿಷ್ಟಮಟ್ಟ ತಲುಪುವ ಸಾಧ್ಯತೆ ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಹೊರಬಿಡಲಾಗುವುದು. ಹಾಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೆಪಿಸಿಎಲ್ (ಕರ್ನಾಟಕ ವಿದ್ಯುತ್ ನಿಗಮ ನಿಯಮಿತ) ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಶಿವಕುಮಾರ್ ಸೂಚನೆ ನೀಡಿದ್ದಾರೆ.
    ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ. 1819 ಸಾಮರ್ಥ್ಯದ ಜಲಾಶಯಕ್ಕೆ ಶನಿವಾರ ಬೆಳಗ್ಗೆ 1801.35 ಅಡಿಗೆ ಏರಿಕೆಯಾಗಿದೆ. 30 ಸಾವಿರ ಕ್ಯೂಸೆಕ್‌ಗಳಿಗಿಂತ ಅಧಿಕ ನೀರು ಹರಿದುಬರುತ್ತಿದೆ. ಇದೇ ರೀತಿ ನೀರಿನ ಹರಿವು ಮುಂದುವರಿದರೆ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರು ಹೊರಬಿಡಲಾಗುವುದು ಎಂದಿದ್ದಾರೆ.
    ಆದ್ದರಿಂದ ಜಲಾಶಯದ ಕೆಳದಂಡೆ ಹಾಗೂ ನದಿ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಸಾಮಗ್ರಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts