ಲಿಂಗರಾಜ ಕಾಲೇಜ್‌ಗೆ ಅತ್ಯುತ್ತಮ ಎನ್‌ಸಿಸಿ ಘಟಕ ಪ್ರಶಸ್ತಿ

blank

ಬೆಳಗಾವಿ: ನಗರದ ಲಿಂಗರಾಜ ಕಾಲೇಜಿಗೆ ಅತ್ಯುತ್ತಮ ಎನ್‌ಸಿಸಿ ಘಟಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಲಿಂಗರಾಜ ಕಾಲೇಜಿನ ಎನ್‌ಸಿಸಿ ಘಟಕದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಜರುಗಿದ ವಿವಿಧ ಶಿಬಿರಗಳಲ್ಲಿ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ಚಿನ್ನದ ಹಾಗೂ ಬೆಳ್ಳಿ ಪದಕ ಪಡೆದಿದ್ದಾರೆ. ಕಾಲೇಜಿನ ಎನ್‌ಸಿಸಿ ಘಟಕದ ಕೊಡುಗೆ ಪರಿಶೀಲಿಸಿ ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯವು ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲದಲ್ಲಿ ಜರುಗಿದ ಸಮಾರಂಭದಲ್ಲಿ ಲಿಂಗರಾಜ ಕಾಲೇಜಿಗೆ 2024-25ನೇ ಸಾಲಿನ ಅತ್ಯುತ್ತಮ ಎನ್‌ಸಿಸಿ ಘಟಕ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಗೋವಾ ಎನ್‌ಸಿಸಿ ನಿರ್ದೇಶನಾಲಯದ ಉಪನಿರ್ದೇಶಕ ಏರ್ ಕಮಾಂಡರ ಬಿ. ಅರುಣಕುಮಾರ, ಲಿಂಗರಾಜ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ, ಡಾ.ಮಹೇಶ ಗುರನಗೌಡರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿದ್ಯಾರ್ಥಿಗಳ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಕೆಎಲ್‌ಇ ನಿರ್ದೇಶಕ ಮಹಾಂತೇಶ ಕವಟಗಿಮಠ, ಎನ್‌ಸಿಸಿ ಗ್ರುಪ್ ಕಮಾಂಡರ್ ಕರ್ನಲ್ ಮೋಹನ್ ನಾಯಕ ಅಭಿನಂದಿಸಿದ್ದಾರೆ.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…