
ಮಳವಳ್ಳಿ: ತಾಲೂಕಿನ ಹಾಡ್ಲಿ – ಮೇಗಳಾಪುರ ಸರ್ಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕೆ.ಎಂ.ಲಿಂಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರವಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ.ಲಿಂಗರಾಜು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಿಡಿಒ ಜಿ.ಎಂ.ರಾಮಕೃಷ್ಣ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ಸರೋಜಮ್ಮ, ನಿಕಟಪೂರ್ವ ಅಧ್ಯಕ್ಷ ರವಿ, ನಿರ್ದೇಶಕರಾದ ಎಚ್.ಸಿ.ನಾಗರಾಜು, ಬಿ.ಎಸ್.ಕೃಷ್ಣಪ್ರಸಾದ್, ಎಂ.ನಾಗರಾಜು, ಶಿವಲಿಂಗೇಗೌಡ, ಮಮತಾ, ಶಿವಮಲ್ಲೇಗೌಡ, ಗೌರಮ್ಮ, ಮುನಿಯಪ್ಪ, ಸಿದ್ದಮ್ಮ ಸೇರಿದಂತೆ ಇತರ ಮುಖಂಡರು ಇದ್ದರು.