ಲಿಂಗಸುಗೂರು: ಪುರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ಗೌಳಿಪುರ ಗಲ್ಲಿಯ ಚರಂಡಿಗಳನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ ಗೌಳಿ ಸಮಾಜ ಅಭಿವೃದ್ಧಿ ಸೇವಾ ಸಂಘದ ನೇತೃತ್ವದಲ್ಲಿ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ರವಿ ಸಿರಗುಪ್ಪಿಗೆ ಬುಧವಾರ ಮನವಿ ಸಲ್ಲಿಸಿದರು.
ಕಳೆದ ಒಂದು ವರ್ಷದಿಂದ ಚರಂಡಿಗಳನ್ನು ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರು ರಸ್ತೆ ಮೂಲಕ ಹರಿದು ಮನೆಗಳಿಗೆ ನುಗ್ಗುತ್ತಿದೆ. ಈ ಕುರಿತು ವಾರ್ಡ್‌ನ ಸದಸ್ಯರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಚರಂಡಿ ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡ, ಶೌಚಗೃಹಗಳನ್ನು ತೆರವುಗೊಳಿಸಬೇಕು. ಚರಂಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕೆಂದು ಒತ್ತಾಯಿಸಿದರು.
