More

    ಮೂರು ಏತ ನೀರಾವರಿ ಯೋಜನೆಗಳಿಗೆ ಶೀಘ್ರ ಮಂಜೂರಾತಿ


    ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಹೇಳಿಕೆ

    ಲಿಂಗಸುಗೂರು: ನಾರಾಯಣಪುರ ಬಲದಂಡೆ, ರಾಂಪೂರ ಮತ್ತು ನಂದವಾಡಗಿ ಏತ ನೀರಾವರಿ ಯೋಜನೆಗಳಿಗೆ ಸರ್ಕಾರದಿಂದ ಶೀಘ್ರ ಮಂಜೂರಾತಿ ದೊರೆಯಲಿದೆ ಎಂದು ಮಾಜಿ ಶಾಸಕ, ಹಟ್ಟಿ ಚಿನ್ನದಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್ ಹೇಳಿದರು.

    ಪಟ್ಟಣದಲ್ಲಿ ಬುಧವಾರ ಸದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸತತ ಬರಗಾಲ ಮತ್ತು ನೀರಾವರಿ ಸೌಲಭ್ಯದಿಂದ ವಂಚಿತಗೊಂಡು ನಗರ ಪ್ರದೇಶಗಳಿಗೆ ರೈತರು ಗುಳೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ನಂದವಾಡಗಿ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ 35 ಹಳ್ಳಿಗಳ 25 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಕಾಚಾಪುರ ಏತ ನೀರಾವರಿ ಯೋಜನೆ ಜಾರಿಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

    ಅಮರೇಶ್ವರ ಏತ ನೀರಾವರಿ ಯೋಜನೆ ಜಾರಿಗೊಳಿಸಿ ಸುಮಾರು 4 ಸಾವಿರ ಹೆಕ್ಟೇರ್ ಪ್ರದೇಶವನ್ನು ನೀರಾವರಿ ವ್ಯಾಪ್ತಿಗೆ ಒಳಪಡಿಸಲಾಗುವುದು. ರೈತರ ಬಹುದಿನದ ಬೇಡಿಕೆಯಾದ ಗೌಡೂರು ಏತ ನೀರಾವರಿ ಬದಲು ಗೋಲಪಲ್ಲಿ ಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ಮತ್ತು ಕುಡಿವ ನೀರಿನ ಸಮಸ್ಯೆ ನೀಗಿಸಲು ಡಾ.ಬಿ.ಆರ್.ಅಂಬೇಡ್ಕರ್ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗುವುದು.

    ಈ ಮೂರು ಏತ ನೀರಾವರಿ ಯೋಜನೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗೆ ಮನವರಿಕೆ ಮಾಡಿಕೊಡಲಾಗಿದೆ. 2022ರ ಡಿಸೆಂಬರ್‌ನೊಳಗೆ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ ಎಂದು ಮಾನಪ್ಪ ವಜ್ಜಲ್ ತಿಳಿಸಿದರು. ಬಿಜೆಪಿ ಮುಖಂಡರಾದ ಗಿರಿಮಲ್ಲನಗೌಡ ಪಾಟೀಲ್, ಡಾ.ಶಿವಬಸಪ್ಪ ಹೆಸರೂರು, ಮುದುಕಪ್ಪ ನಾಯಕ, ವೆಂಕನಗೌಡ ಐದನಾಳ, ಹುಲ್ಲೇಶ ಸಾಹುಕಾರ, ಅಬ್ದುಲ್ ಬೇಕರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts