More

    ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.04 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ 14 ಕ್ರಸ್ಟ್‌ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ 1.04 ಲಕ್ಷ ಕ್ಯೂಸೆಕ್ ನೀರನ್ನು ಮಂಗಳವಾರ ಬಿಡಲಾಯಿತು.

    ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವುದರಿಂದ ಕೊಯ್ನ ಜಲಾಶಯ ಭರ್ತಿಯಾಗಿದ್ದು, ಆಲಮಟ್ಟಿ ಆಣೆಕಟ್ಟೆಗೆ ನೀರು ಹರಿದು ಬರುತ್ತಿದೆ. ಆಲಮಟ್ಟಿ ಅಣೆಕಟ್ಟೆಯಿಂದ ಬಸವಸಾಗರ ಜಲಾಶಯಕ್ಕೆ 95 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕಕ್ಕೆ 6 ಸಾವಿರ ಕ್ಯೂಸೆಕ್ ಮತ್ತು 14 ಕ್ರಸ್ಟ್‌ಗೇಟ್‌ಗಳ ಮೂಲಕ 98,924 ಕ್ಯೂಸೆಕ್ ಒಟ್ಟು 1.04 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 492.252 ಮೀ. ಇದ್ದು, ಮಂಗಳವಾರ 492.25 ಮೀ. ಇತ್ತು.

    ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. 1.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಟ್ಟರೆ ಶೀಲಹಳ್ಳಿ ಸೇತುವೆ ಮೇಲೆ ಹರಿಯಲಿದ್ದು, ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಜನರು ಜಲದುರ್ಗ ಮಾರ್ಗವಾಗಿ 45 ಕಿ.ಮೀ. ಸುತ್ತುವರಿದು ತಾಲೂಕು ಕೇಂದ್ರಕ್ಕೆ ಬರುವ ಅನಿವಾರ್ಯತೆ ಎದುರಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts