More

    ಕಾಲೇಜನ್ನು ಕಪ್ಪು ಪಟ್ಟಿಗೆ ಸೇರಿಸಲು ಬಂಜಾರ ಸೇವಾ ಸಂಘ ಒತ್ತಾಯ

    ಲಿಂಗಸುಗೂರು: ಪಟ್ಟಣದ ಸರ್ ಎಂ.ವಿಶ್ವೇಶ್ವರಯ್ಯ ಪಿಯು ವಿಜ್ಞಾನ ವಿಭಾಗದ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿದ್ದ ವಿದ್ಯಾರ್ಥಿನಿ ಸಾವು ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಘಟನೆಗೆ ಕಾರಣರಾದವರನ್ನು ಬಂಧಿಸಿ ಕಾಲೇಜನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಕಾಲೇಜು ಹಾಗೂ ವಸತಿ ನಿಲಯದ ಸಿಸಿ ಕ್ಯಾಮರಾ ತಪಾಸಣೆ ನಡೆಸಬೇಕು. ಪ್ರಕರಣವನ್ನು ಸಿಒಡಿ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಸಂಘದ ಜಿಲ್ಲಾಧ್ಯಕ್ಷ ನಾರಾಯಣಪ್ಪ ನಾಯ್ಕ, ತಾಲೂಕು ಅಧ್ಯಕ್ಷ ಲಾಲಪ್ಪ ರಾಥೋಡ್, ಮುಖಂಡರಾದ ಜೀವಲೆಪ್ಪ ನಾಯ್ಕ, ವೆಂಕಟೇಶ ರಾಥೋಡ್, ಸೋಮನಾಥ ಪವಾರ್, ನಾಗರಡ್ಡಿ ರಾಥೋಡ್, ನೀಲಪ್ಪ ಪವಾರ್, ಶಂಕರ್ ಪವಾರ್, ಅಮರೇಶ ನಾಯ್ಕ, ಪವನಕುಮಾರ ಕಮದಾಳ, ತಾಂಬಣ್ಣ, ಶಿವಪ್ಪ ರಾಥೋಡ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts