More

    ಜಲಧಾರೆ ಯೋಜನೆಗೆ 2300 ಕೋಟಿ ರೂ.: ಸಂಸದ ಅಮರೇಶ್ವರ ನಾಯಕ ಹೇಳಿಕೆ


    ಲಿಂಗಸುಗೂರು: ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ನೀಗಿಸಲು ಕೇಂದ್ರ ಸರ್ಕಾರ ಜಲಧಾರೆ ಯೋಜನೆಯಡಿ 2300 ಕೋಟಿ ರೂ. ಮಂಜೂರು ಮಾಡಿದ್ದು, ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದೆಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದರು. ಬಸವಸಾಗರ ಜಲಾಶಯದಿಂದ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಕುಡಿವ ನೀರಿನ ಸಮರ್ಪಕ ಪೂರೈಕೆಗೆ ಜಲಧಾರೆ ಯೋಜನೆಯಡಿ 2300 ಕೋಟಿ ರೂ. ಮಂಜೂರಾಗಿದೆ. ಲಿಂಗಸುಗೂರಿಗೆ ಅಮೃತ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ 100 ಕೋಟಿ ರೂ., ಕವಿತಾಳಕ್ಕೆ 51 ಕೋಟಿ ರೂ., ಮಾನವಿಗೆ 92 ಕೋಟಿ ರೂ. ಮಂಜೂರಾಗಿದೆ. ಎರಡನೇ ಹಂತದಲ್ಲಿ ಮುದಗಲ್‌ಗೆ 16 ಕೋಟಿ ರೂ. ಮತ್ತು ಹಟ್ಟಿಗೆ 37 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದರು.

    ಭಾರತ ಮಾಲಾ ಯೋಜನೆಯಡಿ 1250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಿಂದ ರಾಯಚೂರು 324 ಕಿಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಬೆಳಗಾವಿಯಿಂದ ಹುನಗುಂದ ಮತ್ತು ಹುನಗುಂದದಿಂದ ರಾಯಚೂರುವರೆಗೆ ಎರಡು ಪ್ಯಾಕೇಜ್‌ನಲ್ಲಿ ಟೆಂಡರ್ ಕರೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಜೇವರ್ಗಿ-ಚಾಮರಾಜನಗರ ಹೆದ್ದಾರಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು.
    ಗದಗ-ವಾಡಿ ರೈಲ್ವೆ ಯೋಜನೆಗೆ ಶೇ. 80 ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಗದಗ-ಕೃಷ್ಣ ರೈಲ್ವೆ ಮಾರ್ಗ ಸಮೀಕ್ಷೆ ಕಾರ್ಯಕ್ಕೆ ಆದೇಶ ನೀಡಲಾಗಿದೆ. ರಾಯಚೂರು ರೈಲು ನಿಲ್ದಾಣ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ, ಬಿಜೆಪಿ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್, ಪ್ರಮುಖರಾದ ಗಿರಿಮಲ್ಲನಗೌಡ ಪಾಟೀಲ್, ಗಜೇಂದ್ರ ನಾಯಕ, ಗೋವಿಂದ ನಾಯಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts