More

    ಕೃಷ್ಣಾ ನದಿಗೆ 1.62 ಲಕ್ಷ ಕ್ಯೂಸೆಕ್ ನೀರು

    ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 22 ಕ್ರಸ್ಟ್‌ಗೇಟ್‌ಗಳ ಮೂಲಕ ಬುಧವಾರ 1.62 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿ ನಡುಗಡ್ಡೆ ಹಳ್ಳಿಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮೇಲೆ ನೀರು ಹರಿಯುತ್ತಿದೆ.

    ಆಲಮಟ್ಟಿ ಅಣೆಕಟ್ಟೆಯಿಂದ ಬಸವಸಾಗರ ಜಲಾಶಯಕ್ಕೆ 1.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯದಿಂದ 1.56 ಲಕ್ಷ ಕ್ಯೂಸೆಕ್ ನೀರು ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ನೇರವಾಗಿ ಮತ್ತು ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 6 ಸಾವಿರ ಕ್ಯೂಸೆಕ್ ನೀರು ಸೇರಿ ಒಟ್ಟು 1.62 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಜಲಾಶಯದ ಗರಿಷ್ಟ ಸಂಗ್ರಹ ಸಾಮರ್ಥ್ಯ 492.252 ಮೀ. (33 ಟಿಎಂಸಿ) ಇದ್ದು, ಬುಧವಾರ ನೀರಿನ ಮಟ್ಟ 491.42 ಮೀ. (29.573 ಟಿಎಂಸಿ) ಇತ್ತು.

    ಶೀಲಹಳ್ಳಿ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ನದಿ ತೀರದ ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಜನತೆ ಜಲದುರ್ಗ ಮಾರ್ಗವಾಗಿ ತಾಲೂಕು ಕೇಂದ್ರಕ್ಕೆ 45 ಕಿಮೀ. ಸುತ್ತುವರಿದು ಬರಬೇಕಿದೆ. ನಡುಗಡ್ಡೆ ಪ್ರದೇಶವಾಗಿರುವ ಮ್ಯಾದರಗಡ್ಡಿ, ಕರಕಲಗಡ್ಡಿ, ವೆಂಕಮ್ಮನಗಡ್ಡಿ ನಿವಾಸಿಗಳು ಬಾಹ್ಯ ಸಂಪಕ ಕಳೆದುಕೊಂಡಿದ್ದಾರೆ. ಶೀಲಹಳ್ಳಿ ಸೇತುವೆ ಮುಳುಗಡೆಯಾಗಿರುವುದರಿಂದ ಪೊಲೀಸರು ನಿಗಾ ವಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts