More

    ಕೃಷ್ಣಾ ನದಿಯಲ್ಲಿ ತಗ್ಗಿದ ಪ್ರವಾಹ; ಶೀಲಹಳ್ಳಿ ಸೇತುವೆ ಸಂಚಾರಕ್ಕೆ ಮುಕ್ತ



    ಲಿಂಗಸುಗೂರು: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 23 ಕ್ರಸ್ಟ್ ಗೇಟುಗಳ ಮೂಲಕ 1,33,190 ಕ್ಯೂಸೆಕ್ ನೀರನ್ನು ಶುಕ್ರವಾರ ಬಿಡಲಾಗಿದೆ. ನದಿಯಲ್ಲಿ ಪ್ರವಾಹ ತಗ್ಗಿದ್ದರಿಂದ ನಡುಗಡ್ಡೆ ಹಳ್ಳಿಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

    ಆಲಮಟ್ಟಿ ಆಣೆಕಟ್ಟೆಯಿಂದ ಬಸವಸಾಗರ ಜಲಾಶಯಕ್ಕೆ 1.30 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1,27,190 ಕ್ಯೂಸೆಕ್ ನೀರು ಕ್ರಸ್ಟ್ ಗೇಟುಗಳ ಮೂಲಕ ಮತ್ತು ಮುರುಡೇಶ್ವರ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 6 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 492.252 ಮೀ. (33 ಟಿಎಂಸಿ) ಇದ್ದು, ಶುಕ್ರವಾರ ನೀರಿನ ಮಟ್ಟ 491.13 ಮೀ. (28.33 ಟಿಎಂಸಿ) ಇದೆ. ಗುರುವಾರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಇತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts