More

  ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಿ

  ಲಿಂಗಸುಗೂರು: ಮಿನಿ ವಿಧಾನಸೌಧದಲ್ಲಿರುವ ಕಚೇರಿಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣಕ್ಕೆ ಸ್ಥಳಾಂತರಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಸಿ ಅವಿನಾಶ ಶಿಂಧೆಗೆ ಶುಕ್ರವಾರ ಮನವಿ ಸಲ್ಲಿಸಿದರು.

  ಇದನ್ನೂ ಓದಿ: ಸರ್ಕಾರಿ ಕಚೇರಿಗಳಿಗೆ ಸ್ವಂತ ಕಟ್ಟಡ ಒದಗಿಸಿ

  ಮಿನಿ ವಿಧಾನಸೌಧವನ್ನು 2016ರಲ್ಲಿ ನಿರ್ಮಿಸಲಾಗಿದೆ. ಪಟ್ಟಣದ ಬಸ್ ನಿಲ್ದಾಣದಿಂದ ಸುಮಾರು ಮೂರು ಕಿಮೀ ದೂರದಲ್ಲಿದೆ. ಇದರಿಂದ ಗ್ರಾಮೀಣ ಭಾಗದ ಜನರು ವಿವಿಧ ಕೆಲಸ ಕಾರ್ಯಗಳಿಗೆ ಮಿನಿ ವಿಧಾನಸೌಧಕ್ಕೆ ತೆರಳಲು ಸಾರಿಗೆ ಮತ್ತು ಆಟೋ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  ವೃದ್ಧರು, ಮಹಿಳೆಯರು ಮಕ್ಕಳ ಜತೆ ಆಗಮಿಸಿದರೆ ಸಂಕಷ್ಟ ಎದುರಿಸುವಂತಾಗಿದೆ. ಅನಿವಾರ್ಯ ಪರಿಸ್ಥಿತಿ ವೇಳೆ 150 ರೂ. ಆಟೋ ಬಾಡಿಗೆ ನೀಡಬೇಕಿದೆ. ಝರಾಕ್ಸ್ ಪ್ರತಿ ಅಗತ್ಯವಿದ್ದರೆ ಪಟ್ಟಣಕ್ಕೆ ಆಮಿಸಬೇಕಿದೆ.

  ಸಾರ್ವಜನಿಕರ ತೊಂದರೆ ನಿವಾರಣೆಗೆ ಪಟ್ಟಣದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರದ ವಿಶಾಲ ಪ್ರದೇಶದಲ್ಲಿ ನೂತನ ಮಿನಿ ವಿಧಾನಸೌಧ ನಿರ್ಮಿಸಬೇಕು. ಸದ್ಯದ ಪ್ರವಾಸಿ ಮಂದಿರವನ್ನು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts