More

    ಗಾಣಿಗ ಸಮುದಾಯ ಸಂಘಟಿತವಾಗಲಿ ; ಶಾಸಕ ಡಿ.ಎಸ್.ಹೂಲಗೇರಿ ಸಲಹೆ

    ಲಿಂಗಸುಗೂರು: ಯಾವುದೇ ಒಂದು ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸದೃಢ ಹೊಂದಲು ಸಂಘಟನೆಯಿಂದ ಮಾತ್ರ ಸಾಧ್ಯ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.

    ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ಗಾಣಿಗ ಸಂಘದ ನೌಕರರ, ಮಹಿಳಾ, ಯುವ ಘಟಕಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಭಾನುವಾರ ಉದ್ಘಾಟಿಸಿ ಮಾತನಾಡಿದರು. ಗಾಣಿಗ ಸಮುದಾಯ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಜತೆಗೆ ಸರ್ಕಾರದ ಸವಲತ್ತು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಗಾಣಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಮುದಾಯ ರಾಜಕೀಯವಾಗಿ ಬೆಳೆಯುತ್ತಿದ್ದು, ಜತೆಗೆ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಬೇಕು. ಸದೃಢ ಸಮಾಜ ನಿರ್ಮಾಣಕ್ಕೆ ಒಗ್ಗಟ್ಟು ಅಗತ್ಯವಾಗಿದ್ದು, ಅನ್ಯ ಸಮುದಾಯವನ್ನು ಗೌರವಿಸುತ್ತ ಸಂಘಟಿತರಾಗಬೇಕು. ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ. ನೀಡಿದ್ದು, ಸಮುದಾಯದ ಏಳಿಗೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

    ಕಟಗಿಹಳ್ಳಿ ಕೇಶವಾನಂದ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಗಾಣಿಗ ಸಮುದಾಯದ ತಾಲೂಕು ಅಧ್ಯಕ್ಷ ಸಿದ್ದನಗೌಡ ಪೊಲೀಸ್ ಪಾಟೀಲ್, ಮುಖಂಡರಾದ ಅಮರಗುಂಡಪ್ಪ ಮೇಟಿ, ಸೋಮಶೇಖರ ಐದನಾಳ, ಬಸವರಾಜ ನೀರಲಕೇರಿ, ಶರಣಪ್ಪ ಮೇಲ್ಮನಿ, ಸಂಗಣ್ಣ ಹೊಸೂರು, ಮಹಾಲಿಂಗಪ್ಪ ವಕೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts