18 C
Bangalore
Friday, December 6, 2019

ಗಡಿ ಭಾಗಗಳಲ್ಲಿ ಕನ್ನಡ ಉಳಿಸುವ ಕೆಲಸವಾಗಲಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಸಂಸದ ರಾಜಾ ಅಮರೇಶ್ವರ ನಾಯಕ ಸಲಹೆ | ಕರವೇಯಿಂದ ಕನ್ನಡ ರಾಜ್ಯೋತ್ಸವ

ಲಿಂಗಸುಗೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಕನ್ನಡ ಭಾಷೆಯ ಬಗ್ಗೆ ತಾತ್ಸಾರ ಮನೋಭಾವ ತಾಳದೆ, ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ಬುಧವಾರ ಸಂಜೆ ಆಯೋಜಿಸಿದ್ದ ಕನ್ನಡ ನಾಡಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು. ಕನ್ನಡ ಭಾಷೆ ತನ್ನದೇ ಆದ ಕಲೆ, ಸಾಹಿತ್ಯ, ಸಂಸ್ಕೃತಿ ಹೊಂದಿದೆ. ನಾಡಿನ ಗಡಿ ಭಾಗಗಳಲ್ಲಿ ಕನ್ನಡ ಭಾಷೆ ಉಳಿಸುವಲ್ಲಿ ಜಾಗೃತಿ ವಹಿಸಬೇಕಿದೆ ಎಂದರು.

ಕನ್ನಡ ನಾಡು ಎಲ್ಲರನ್ನೂ ಸ್ವಾಗತಿಸುತ್ತ ಶಾಂತಿ ಸಾಮರಸ್ಯಕ್ಕೆ ಹೆಸರಾಗಿದೆ. ಅನ್ಯ ರಾಜ್ಯಗಳಲ್ಲಿ ಅವರ ಭಾಷೆ ಒತ್ತಡದ ಮೇರೆಗೆ ಕಲಿಸುತ್ತಾರೆ. ಆದರೆ, ಕನ್ನಡಿಗರು ಅನ್ಯ ಭಾಷೆಗಳನ್ನೂ ಗೌರವಿಸುವ ಸಂಸ್ಕೃತಿ ಉಳ್ಳವರಾಗಿದ್ದಾರೆ. ಕನ್ನಡ ನಾಡು, ನುಡಿ, ನೆಲ, ಜಲ ಉಳಿವಿಗೆ ಕನ್ನಡ ಪರ ಸಂಘಟನೆಗಳು ತಮ್ಮದೆ ಆದ ಕೊಡುಗೆ ನೀಡುತ್ತ ಬರುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾಡು, ನುಡಿ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ನಾಡಿನ ಪ್ರತಿಯೊಬ್ಬರೂ ಮಾತೃಭಾಷೆ, ದೇಶಾಭಿಮಾನ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ಮಾಜಿ ಶಾಸಕ ಮಾನಪ್ಪ ವಜ್ಜಲ್, ಕರವೇ ಜಿಲ್ಲಾ ಅಧ್ಯಕ್ಷ ಎಂ.ವಿನೋದರಡ್ಡಿ, ರಾಜ್ಯ ಉಸ್ತುವಾರಿ ಬಸವರಾಜ ಪಡಕೋಟೆ, ಟಿಎಚ್‌ಒ ಡಾ.ರುದ್ರಗೌಡ ಪಾಟೀಲ್, ಪಿಎಸ್‌ಐ ಪ್ರಕಾಶರಡ್ಡಿ ಡಂಬಳ, ಮುಖಂಡರಾದ ರಾಜಾ ಶ್ರೀನಿವಾಸ ನಾಯಕ, ಎಸ್.ಎಚ್.ಹಮ್ಮಾಪುರ, ಭೂಪನಗೌಡ ಪಾಟೀಲ್, ವೀರನಗೌಡ ಲೆಕ್ಕಿಹಾಳ, ಗಜೇಂದ್ರ ನಾಯಕ, ಖಾದರಪಾಷಾ, ರಘು ಪಡಕೋಟೆ, ಅಮರೇಶ ಜಾಲಿಬೆಂಚಿ, ಫಯಾಜ್ ಅಹ್ಮದ್, ರೌಫ್ ಗ್ಯಾರಂಟಿ, ಗಂಗಣ್ಣ, ಜಿಲಾನಿಪಾಷಾ, ಜ್ಯೂ.ವಿಷ್ಣುವರ್ಧನ್ ಕಾಶಿಂಸಾಬ್ ಸೇರಿ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...