ಉಪಾಹಾರ ಸೇವಿಸಿ ಮಕ್ಕಳು ಅಸ್ವಸ್ಥ

ಲಿಂಗಸುಗೂರು(ರಾಯಚೂರು):  ಸ್ಥಳೀಯ ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರಿನ ಅಲ್ಪಸಂಖ್ಯಾತ ಇಲಾಖೆಯ ಮುರಾರ್ಜಿ ವಸತಿ ಶಾಲೆಯ ಮಕ್ಕಳು ಸೋಮವಾರ ಬೆಳಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಬೆಳಗ್ಗೆ ಚಿತ್ರಾನ್ನ ನೀಡಿದ್ದು, 7-8 ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಾಲೆ ಸಿಬ್ಬಂದಿ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನಂತರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿದ್ದಾರೆ.