More

    ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ

    ಲಿಂಗಸುಗೂರು: ಬೆಂಗಳೂರಿನಲ್ಲಿ ಫೆ.8 ರಂದು ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಬೆಳ್ಳಿಹಬ್ಬ ಹಾಗೂ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಅಮರಪ್ಪ ಸಾಲಿ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ಸಂಘದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿ ಹೋರಾಟ ನಡೆಸುತ್ತಿದ್ದರೂ ಸ್ಪಂದನೆ ದೊರೆತಿಲ್ಲ. ಬಡ್ತಿ ಹೊಂದಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಪಡಿಸಬೇಕು. ಪ್ರತಿ ಶೈಕ್ಷಣಿಕ ವರ್ಷಕ್ಕೆ 30 ಗಳಿಕೆ ರಜೆ ಮತ್ತು ಇತರ ಆರ್ಥಿಕ ಸೌಲಭ್ಯ ನೀಡಬೇಕು ಎಂದರು.

    ಅನ್ನಭಾಗ್ಯ, ಕ್ಷೀರಭಾಗ್ಯ, ಪೋಷಣಾ ಯೋಜನೆ, ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ಬೋಧಕೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕು. ಹಿರಿಯ ಪ್ರಾಥಮಿಕ ಶಾಲೆಗಳಿಗೆ ಡಿ ದರ್ಜೆ ನೌಕರ ನೇಮಕ ಮಾಡಬೇಕು. ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಿಗೆ ಒತ್ತಾಯಿಸಲಾಗುವುದೆಂದು ತಿಳಿಸಿದರು. ತಾಲೂಕು ಕಾರ್ಯದರ್ಶಿ ಕೆ.ಸುಭಾಷ್, ಪ್ರಮುಖರಾದ ಮಾರುತಿ, ಮಲ್ಲಪ್ಪ ಪೂಜಾರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts