ಶಿಕ್ಷಕರು ಸಮಾಜ ಗೌರವಿಸುವ ಗುರುವಾಗಲಿ, ಲಿಂಗಸುಗೂರಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಸಲಹೆ

ಲಿಂಗಸುಗೂರು: ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಕರು ಸಮಾಜ ಗೌರವಿಸುವ ಗುರುವಾಗಬೇಕೆಂದು ಶಾಸಕ ಡಿ.ಎಸ್.ಹೂಲಗೇರಿ ಸಲಹೆ ನೀಡಿದರು.

ಪಟ್ಟಣದ ರಾಘವೇಂದ್ರ ಸ್ವಾಮಿ ಮಠದಲ್ಲಿ ಶಿಕ್ಷಣ ಇಲಾಖೆ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಪ್ರತಿಭಾ ಕಾರಂಜಿ ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು. ಸಿಆರ್‌ಪಿಗಳು ಆಯಾ ಶಾಲೆಗಳಿಗೆ ತೆರಳಿ ಶಿಕ್ಷಣ ವ್ಯಸಸ್ಥೆ ಕುರಿತು ಪರಿಶೀಲನೆ ನಡೆಸಬೇಕು ಎಂದರು.

ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ವಿಶೇಷ ಉಪನ್ಯಾಸ ನೀಡಿ, ಪಠ್ಯ ವಿಷಯದ ಜತೆಗೆ ನೈತಿಕ ಮೌಲ್ಯಗಳು, ಸಂಸ್ಕಾರವಂತ ಮಕ್ಕಳನ್ನಾಗಿ ರೂಪಿಸಬೇಕು. ಸರ್ಕಾರ 100ಕ್ಕೂ ಹೆಚ್ಚು ಯೋಜನೆಗಳನ್ನು ಶಾಲೆಗಳಿಗೆ ವಹಿಸಿದ್ದರಿಂದ ಶಿಕ್ಷಕರಲ್ಲಿ ಆತ್ಮಸ್ಥೈರ್ಯ ಕುಂದುತ್ತಿದೆ. ಅನ್ಯ ಕೆಲಸ ಕಾರ್ಯಗಳು ಹೆಚ್ಚಳದ ಮಧ್ಯೆಯೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.

ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ್, ಜಿಪಂ ಸದಸ್ಯ ಬಸನಗೌಡ ಕಂಬಳಿ, ಎಪಿಎಂಸಿ ಅಧ್ಯಕ್ಷ ಜಂಬನಗೌಡ ಪಾಟೀಲ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ನಾಗನಗೌಡ ತುರಡಗಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ್, ಡಿಡಿಪಿಐ ಬಿ.ಕೆ.ನಂದನೂರ, ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಪಂ ಇಒ ಪ್ರಕಾಶ ವಡ್ಡರ್, ಬಿಇಒ ಅಶೋಕ ಸಿಂಧಗಿ, ನೌಕರರ ಸಂಘದ ಅಧ್ಯಕ್ಷ ಭೀಮಪ್ಪ ನಾಯಕ ಇದ್ದರು.

Leave a Reply

Your email address will not be published. Required fields are marked *