More

    ‘ಲಿಂಗಾಯತ ಮಠಾಧಿಪತಿಗಳ ಒಕ್ಕೂಟ’ ಅಸ್ತಿತ್ವಕ್ಕೆ

    ಬೆಳಗಾವಿ: ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಶನಿವಾರ ಲಿಂಗಾಯತ ಮಠಾಧೀಶರ ಚಿಂತನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಗದಗ-ಡಂಬಳ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಲಿಂಗಾಯತ ಧರ್ಮದಲ್ಲಿ ನೂರಾರು ಒಳಪಂಗಡಗಳಿವೆ. ಅವುಗಳಲ್ಲಿ ಸಾಮರಸ್ಯ ಸಾಧಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಅಂದಾಗ ಮಾತ್ರ ಜಾಗತಿಕ ಮಟ್ಟದಲ್ಲಿ ಬಸವಣ್ಣ ಸ್ಥಾಪಿಸಿದ ಧರ್ಮ ಗುರುತಿಸುವಂತಾಗುತ್ತದೆ. ಈ ಉದ್ದೇಶದಿಂದಲೇ ‘ಲಿಂಗಾಯತ ಮಠಾಧಿಪತಿಗಳ ಒಕ್ಕೂಟ’ ಅಸ್ತಿತ್ವಕ್ಕೆ ಬಂದಿದೆ ಎಂದರು.

    ಅಧ್ಯಕ್ಷರಾಗಿ ಭಾಲ್ಕಿ ಶ್ರೀ ನೇಮಕ: ಕಾರ್ಯಕ್ರಮದಲ್ಲಿ ಅಸ್ತಿತ್ವಕ್ಕೆ ಬಂದ ‘ಲಿಂಗಾಯತ ಮಠಾಧಿಪತಿಗಳ ಒಕ್ಕೂಟ’ದ ಕಾರ್ಯ ಮತ್ತು ಧ್ಯೇಯೋದ್ದೇಶಗಳನ್ನು ಶ್ರೀಗಳು ವಿವರಿಸಿದರು. ಒಕ್ಕೂಟದ ಪ್ರಥಮ ಅಧ್ಯಕ್ಷರಾಗಿ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು ಅವಿರೋಧವಾಗಿ ಆಯ್ಕೆಯಾದರು.

    ಶುಕ್ರವಾರ ಮತ್ತು ಶನಿವಾರ ನಡೆದ ವಿಶೇಷ ಚಿಂತನ ಶಿಬಿರದಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ, ಮೈಸೂರು ಹೊಸಮಠದ ಚಿದಾನಂದ ಸ್ವಾಮೀಜಿ, ಭಾಲ್ಕಿ ಬಸವಲಿಂಗ ಪಟ್ಟದೇವರ, ಧಾರವಾಡದ ಮುರುಘಾಮಠ ಮಲ್ಲಿಕಾರ್ಜುನ ಸ್ವಾಮೀಜಿ, ಆನಂದಪುರಂನ ಜಗದ್ಗುರು ಮಲ್ಲಿಕಾರ್ಜುನ ಸ್ವಾಮಿ, ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮಿ. ಡಾ. ಎಸ್.ಎಂ.ಜಾಮದಾರ, ವಾಗ್ದೇವಿ ತಾಯಿ, ಕುಮುದಿನಿ ತಾಯಿ, ಡಾ.ವೀರಣ್ಣ ರಾಜೂರ, ಡಾ.ಜೆ.ಎಸ್. ಪಾಟೀಲ ಹಾಗೂ ವಿಶ್ವಾರಾಧ್ಯ ಸತ್ಯಂಪೇಟೆ ಸೇರಿದಂತೆ ನೂರಕ್ಕೂ ಅಧಿಕ ಶ್ರೀಗಳು ಭಾಗವಹಿಸಿದ್ದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು ನೇತೃತ್ವ ವಹಿಸಿ ಸರ್ವರನ್ನೂ ಸ್ವಾಗತಿಸಿದರು. ಶೇಗುಣಸಿಯ ಮಹಾಂತದೇವರು ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts