More

    ಲಿಂಗಾಯತ ಧರ್ಮಕ್ಕೆ ಸಂವಿಧಾನ ಮಾನ್ಯತೆ ದೊರೆಯಬೇಕು: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಲಿಂಗಾಯತ ಧರ್ಮಕ್ಕೆ ಸಂವಿಧಾನ ಮಾನ್ಯತೆ ದೊರೆಯಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

    ಲಿಂಗಾಯತ ಪ್ರತ್ಯೇಕ ಧರ್ಮ ಪದವನ್ನು ನಾನು ಉಚ್ಚಾರಣೆ ಮಾಡುವುದಿಲ್ಲ. ಆದರೆ, ಲಿಂಗಾಯತ ಧರ್ಮಕ್ಕೆ ಸಿಖ್, ಬೌದ್ಧ ಧರ್ಮಗಳಿರುವಂತೆಯೇ ಸಂವಿಧಾನ ಮಾನ್ಯತೆ ಸಿಗಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

    12ನೇ ಶತಮಾನದಲ್ಲಿ ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದಾರೆ. ಸಂವಿಧಾನ ಮಾನ್ಯತೆ ದೊರೆಯಬೇಕೆಂದು ಹಲವು ವರ್ಷಗಳಿಂದ ಒತ್ತಾಯ ಇದೆ. ಭೌಗೋಳಿಕವಾಗಿ ನಾವೆಲ್ಲ ಹಿಂದುಸ್ಥಾನದಲ್ಲಿದ್ದೇವೆ. ಪ್ರತ್ಯೇಕ ಧರ್ಮ ಮಾಡಲು ಬರುವುದಿಲ್ಲ. ಮಾನ್ಯತೆ ಕೊಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಪಂಚಮಸಾಲಿ ಲಿಂಗಾಯತ ಗೌಡ ಒಳಗೊಂಡಂತೆ ಎಲ್ಲ ಲಿಂಗಾಯತ ಒಳಪಂಡಗಳನ್ನು ಕೇಂದ್ರದ ಒಬಿಸಿ ಮೀಸಲಾತಿಗೆ ಶಿಫಾರಸ್ಸು ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಲಿಂಗಾಯತರು ದಾಸೋಹ, ಶಿಕ್ಷಣ ನೀಡಲು ಮಾತ್ರ ಸೀಮಿತರಲ್ಲ. ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಲಿಂಗಾಯತ ಸಮಾಜ ಬರಬೇಕು ಎಂದರು.

    ರಾಜ್ಯದಲ್ಲಿ ಲಿಂಗಾಯತ ಗೌಡ ಪಂಚಮಸಾಲಿ ಸಮುದಾಯವನ್ನು 2 ‘ಎ’ಗೆ ಸೇರಿಸಬೇಕು ಎಂಬ ಹೋರಾಟ ಒಂದು ಹಂತಕ್ಕೆ ಬಂದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿವೇಶನ ಮುಗಿದ ಕೂಡಲೇ ಕಾನೂನು ಹಾಗೂ ಸಂವಿಧಾನ ತಜ್ಞರ ಸಭೆ ಕರೆದು ಸರ್ಕಾರದ ನಿಲುವನ್ನು ವ್ಯಕ್ತಪಡಿಸುವುದಾಗಿ ಭರವಸೆ ನೀಡಿದ್ದಾರೆ.

    ಸಮುದಾಯದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕು. ಸಾಮಾಜಿಕ ನ್ಯಾಯದ ಅಡಿ ನಮಗೆ 2 ‘ಎ’ ಮೀಸಲಾತಿ ನೀಡಬೇಕೆಂದು ಕೋರಿದ್ದೇವೆ. ಸರ್ಕಾರ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡೆತಡೆ ನಿವಾರಿಸಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts