ಕಾಂಗ್ರೆಸ್ ನಾಯಕರ ನಡೆಗೆ ಲಿಂಗಾಯತ ಸಮುದಾಯ ಗರಂ!

congress lingayata
Published on

ಬೆಂಗಳೂರು: ಕಾಂಗ್ರೆಸ್ ನಾಯಕರ ನಡೆಗೆ ಮತ್ತೊಮ್ಮೆ ಲಿಂಗಾಯತ ಸಮುದಾಯ ಸಿಟ್ಟಾಗಿದೆ.

ಟಿಕೆಟ್ ಹಂಚಿಕೆಯಲ್ಲಿ ಲಿಂಗಾಯತರಿಗೆ ಮಾನ್ಯತೆ ನೀಡದೇ ತಾರತಮ್ಯ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿವಕುಮಾರ್, ಸಿದ್ದರಾಮಯ್ಯ, ‌ಮಲ್ಲಿಕಾರ್ಜುನ ಖರ್ಗೆಗೆ ಲಿಂಗಾಯತ ಮಹಾಸಭಾ ಸಿಟ್ಟಾಗಿ ಪತ್ರ ಬರೆಯಲಾಗಿದೆ.

ಲಿಂಗಾಯತ ಮಠಾಧೀಶರ ಮಾತಿಗೆ ಮನ್ನಣೆ ಸಿಗುತ್ತಿಲ್ಲ, ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯಕ್ಕೆ ಒಂದೇ ಟಿಕೆಟ್​ ನೀಡಲಾಗಿಲ್ಲ. ಎರಡನೇ ಪಟ್ಟಿಯಲ್ಲೂ ಅವಕಾಶ ನೀಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ. ಮುಂಬರುವ ಚುನಾವಣೆಯಲ್ಲಿ ಇದರ ಸಾಧಕ ಬಾಧಕ ಕಾಂಗ್ರೆಸ್ ಎದುರಿಸಬೇಕಾಗುತ್ತದೆ ಎಂದು ರಾಜ್ಯ ನಾಯಕರಿಗೆ ಪತ್ರದ ಮೂಲಕ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಹಾಗೂ ಲಿಂಗಾಯತ ಸಮಾನ ಮನಸ್ಕರ ವೇದಿಕೆಯಿಂದ ಎಚ್ಚರಿಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net