ಲಿಂಗಾಯತ ವೀರಶೈವ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ದಾವಣಗೆರೆಯಲ್ಲಿ ಬೃಹತ್​ ಪ್ರತಿಭಟನೆ

ದಾವಣಗೆರೆ: ಲಿಂಗಾಯತ ವೀರಶೈವ ಸಮಾಜದ ಬಗ್ಗೆ ಜಿಲ್ಲಾ ಪಂಚಾಯ್ತಿ. ಮಾಜಿ ಅಧ್ಯಕ್ಷ ಡಾ. ವೈ.  ರಾಮಪ್ಪ, ತಾಲೂಕಿನ ನೇರ‌್ಲಿಗೆ ಗ್ರಾಮದಲ್ಲಿ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಲಿಂಗಾಯತ ವೀರಶೈವ ಸಮಾನಮನಸ್ಕರ ವೇದಿಕೆ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.

ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಯಿತು. ಜಯದೇವ ವೃತ್ತಕ್ಕೆ ತೆರಳಿದ ಪ್ರತಿಭಟನಾಕಾರರು ಜಯದೇವ ಜಗದ್ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. 
 
ರಾಮಪ್ಪ ಭಾವಚಿತ್ರವಿರುವ ಭಿತ್ತಿಚಿತ್ರಕ್ಕೆ ಚಪ್ಪಲಿ ಏಟು ನೀಡಿ, ಬಳಿಕ ಅದನ್ನು ದಹಿಸಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಮಾಜದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಧಿಕ್ಕಾರ ಕೂಗಿದರು.
 
ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಜಾತಿ, ಧರ್ಮ, ದೇವರಿಗೆ ಅಗೌರವ ತೋರಿದ್ದಾರೆ. ಪ್ರಾಣ ಬೆದರಿಕೆ ಹಾಕಿದ್ದಾರೆ. ಏಕವಚನದಲ್ಲಿ, ಅಸಭ್ಯವಾಗಿ ಮಾತನಾಡಿದ್ದಾರೆ. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
 

Leave a Reply

Your email address will not be published. Required fields are marked *